ಡಿ.ಎಚ್. ಶಂಕರಮೂರ್ತಿ 
ರಾಜಕೀಯ

ಸಚಿವರಿಗೆ ಬೆಂಡೆತ್ತಿದ ಸಭಾಪತಿ ಶಂಕರಮೂರ್ತಿ !

`ನಿಮ್ಮ ಇಲಾಖೆ ಅಧಿಕಾರಿಗಳಿಗೆ ಸ್ವಲ್ಪ ಮಾನವೀಯತೆ ಪಾಠ ಮಾಡಿ' ಹೀಗೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರು ಖಾರವಾದ...

`ನಿಮ್ಮ ಇಲಾಖೆ ಅಧಿಕಾರಿಗಳಿಗೆ ಸ್ವಲ್ಪ ಮಾನವೀಯತೆ ಪಾಠ ಮಾಡಿ' ಹೀಗೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರು ಖಾರವಾದ ಶಬ್ದಗಳಲ್ಲಿ ಬೆಂಡೆತ್ತಿದ ಪ್ರಸಂಗ ಮೇಲ್ಮನೆಯಲ್ಲಿ ನಡೆಯಿತು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಮಹಂತೇಶ ಕೌಜಲಗಿಯವರು ಬೆಳಗಾವಿಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ ಶಿಕ್ಷಕರ ವೇತನ ಆಗದೇ ಇರುವ ವಿಚಾರವನ್ನು ಪ್ರಸ್ತಾಪಿಸಿದರು. ಕಳೆದ ಮೂರು ವರ್ಷಗಳಿಂದಲೂ ಸರಿಯಾದ ರೀತಿಯಲ್ಲಿ ವೇತನ ಪಾವತಿಯಾಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರು, ಈ ವಿಚಾರವಾಗಿಯೇ ನನ್ನ ಕೊಠಡಿಯಲ್ಲಿ ಎರಡು ಬಾರಿ ಅಧಿಕಾರಿಗಳ ಸಭೆ ನಡೆಸಿದ್ದೇನೆ, ಹಣವನ್ನೂ ಬಿಡುಗಡೆ ಮಾಡಿಸಿದ್ದೇನೆ. ಈ ಅಧಿಕಾರಿಗಳಿಗೆ ಸ್ವಲ್ಪವೂ ಮಾನವೀಯತೆಯೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರಲ್ಲದೇ, ಸಚಿವರನ್ನುದ್ದೇಶಿಸಿ, ಮೊದಲು ನೀವು ನಿಮ್ಮ ಅಧಿಕಾರಿಗಳಿಗೆ ಮಾನವೀಯತೆ ಪಾಠ ಮಾಡಿ ಎಂದು ಹೇಳಿದರು. ಅಂಧ ಮಕ್ಕಳು ಓದುವ ಶಾಲೆಯ ಬಗ್ಗೆ ಸ್ವಲ್ಪವೂ ಮಾನವೀಯತೆ ಬೇಡವೇ ಎಂದು ತರಾಟೆಗೆ ತೆಗೆದುಕೊಂಡರು. ಕೂಡಲೇ ಸಮಜಾಯಿಷಿ ನೀಡಿದ ಸಚಿವರು, ಈ ಸಮಸ್ಯೆ ಪರಿಹಾರ ಮಾಡಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT