ಬೆಂಗಳೂರು: ಯಾವುದೇ ಪಕ್ಷದೊಂದಿಗೂ ಮೈತ್ರಿ ಇಲ್ಲ ಎನ್ನುತ್ತಿದ್ದ ಜೆಡಿಎಸ್ ಈಗ ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ಶುರು ಮಾಡಿದೆ. ನಿವೃತ್ತಿಯಾಗುತ್ತಿರುವ ತನ್ನ 5 ಸದಸ್ಯರೊಂದಿಗೆ ಹೆಚ್ಚುವರಿ 2 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಇದಕ್ಕೆ ಬೆಂಬಲ ನೀಡಬೇಕೆಂದು ಕೋರಿಕೆ ಸಲ್ಲಿಸಿದೆ. ಇದಕ್ಕೆ ಕಾಂಗ್ರೆಸ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಜೆಡಿಎಸ್‍ನ 5 ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಈ ಸ್ಥಾನಗಳಲ್ಲಿ ಮತ್ತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಬೆಂಬಲ ಕೋರಲಾಗಿದೆ. ಇದರೊಂದಿಗೆ ಕೋಲಾರ ಮತ್ತು ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕುವುದಕ್ಕೂ ಚಿಂತಿಸಲಾಗಿದ್ದು, ಕಾಂಗ್ರೆಸ್ ಬೆಂಬಲಿಸಿದರೆ ಮಾತ್ರ ಮೈತ್ರಿ ಯಶಸ್ವಿಯಾಗುತ್ತದೆ ಎಂದು ಹೇಳಲಾಗಿದೆ. ಮಾತುಕತೆ ಹೊಣೆಯನ್ನು ಚಲುವರಾಯಸ್ವಾಮಿ,
ಜಮೀರ್ ಅಹ್ಮದ್, ವೈ.ಎಸ್.ವಿ. ದತ್ತ ಅವರಿಗೆ ವಹಿಸಲಾಗಿದ್ದು, ಈಗಾಗಲೇ ಕಾಂಗ್ರೆಸ್ ಮುಖಂಡರೊಂದಿಗೆ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಈ ಬಗ್ಗೆ
ಅಧಿಕೃತ ಚರ್ಚೆ ನಡೆಯದ ಕಾರಣ ಮೈತ್ರಿ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಆಸಕ್ತಿ ಇಲ್ಲ: ಹಾಗೆ ನೋಡಿ-ದರೆ, ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಸಕ್ತಿ ತೋರಿಸುತ್ತಿಲ್ಲ. ಆದರೆ ಪಕ್ಷದೊಳಗಿನ ಕೆಲವು ಶಾಸಕರ ಒತ್ತಡ ಮತ್ತು ರಾಷ್ಟ್ರೀ ಯ ಅಧ್ಯಕ್ಷ ದೇವೇಗೌಡರ ಸೂಚನೆಯಂತೆ ಕಾಂಗ್ರೆಸ್ ಜತೆ ಮೈತ್ರಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಸದ್ಯದ ಮಾತುಕತೆಯಲ್ಲಿ ಪಕ್ಷದ ಸದಸ್ಯರಿರುವ ಮೈಸೂರು, ಮಂಡ್ಯ, ಹಾಸನ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೆಡಿಎಸ್ ಗೆಲುವಿಗೆ ಕಾಂಗ್ರೆಸ್ ಸ್ಪಂದಿಸಬೇಕು. ಹೆಚ್ಚುವರಿ ಯಾಗಿ ಕೋಲಾರ ಮತ್ತು ಚಿಕ್ಕಮಗಳೂರಿನಲ್ಲೂ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್ ಪ್ರಸ್ತಾಪವಿಟ್ಟಿದೆ. ಆದರೆ ಬೆಂಗಳೂರು ಗ್ರಾಮಾಂತರದಿಂದ ಇಂಧನ ಸಚಿವ ಡಿ.ಕೆ.ಶಿವಕುಮಾರ ಸಂಬಂಧಿ ರವಿ ಸ್ಪರ್ಧಿ ವುದು ಖಚಿತವಾಗಿದೆ. ಹೀಗಾಗಿ ಈ ಕ್ಷೇತ್ರ ವನ್ನು ಕಾಂಗ್ರೆಸ್ ಬಿಟ್ಟುಕೊಡುವ ಸಾಧ್ಯತೆಗಳಿಲ್ಲ.ಮೈತ್ರಿ ಖಚಿತವಾದರೆ ಕಾಂಗ್ರೆಸ್ ಗೆಲುವಿಗೆ ಅವಕಾಶವಿರುವ ಕೊಡಗು, ಚಿತ್ರದುರ್ಗ, ಮೈಸೂ ರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ
ಕಣಕ್ಕಿಳಿಸುವುದಿಲ್ಲ. ಬದಲಾಗಿ ತನ್ನ ಮತಗಳನ್ನು ಕೈ ಪರವಾಗಲಿವೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತಂತೆ ಯಾವುದೇ ಪ್ರಸ್ತಾಪ ಬಂದಿಲ್ಲ .ಮಾಜಿ ಸಂಸದೆ ರಮ್ಯಾಗೆ ಟಿಕೆಟ್ ನೀಡುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮುಖಂಡರ ಜೊತೆಗೆ ಚರ್ಚಿಸಿ ಕೈಗೊಳ್ಳಲಾಗುವುದು
ಗೃಹ ಸಚಿವರು, ಕೆಪಿಸಿಸಿ ಅಧ್ಯಕ್ಷರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics