ಬೆಂಗಳೂರು: ವಿಧಾನಪರಿಷತ್ತಿನ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಗಾಗಿ ಜೆಡಿಎಸ್ ಕಾದು ಕುಳಿತಿದೆ. ಈಗಾಗಲೆ ಕಾಂಗ್ರೆಸ್ ಜತೆ ಮಾತುಕತೆ ನಡೆಸಿರುವ ಜೆಡಿಎಸ್ ಮುಖಂಡರು ಮೈತ್ರಿ ಬಗ್ಗೆ ಪಕ್ಷದ ನಾಯಕರು ಪ್ರಕಟಿಸುವ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ನೇತೃತ್ವದಲ್ಲಿ ಗುರುವಾರ ನಡೆದ ಶಾಸಕರ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಇನ್ನು 4 ದಿನಗಳ ಒಳಗೆ ಕಾಂಗ್ರೆಸ್ ಕೈಗೊಳ್ಳುವ ನಿರ್ಧಾರವನ್ನು ಕಾದು ನೋಡಲು ತೀರ್ಮಾನಿಸಲಾಗಿದೆ.
ಈ ಮಧ್ಯೆ ಪಕ್ಷದೊಳಗೆ ಭಿನ್ನಾಪ್ರಾಯವ್ಯಕ್ತವಾಗಿರುವ ಬಗ್ಗೆ ಕೆಲವು ಶಾಸಕರು ಬೇಸರ ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್ ಅಹಮ್ಮದ್ ಖಾನ್ ನಡುವಿನ ಭಿನ್ನಾಭಿಪ್ರಾಯವನ್ನು ಪಕ್ಷದ ಮೇಲೆ ಹೇರುವುದು ಸರಿಯಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಭಿನ್ನಾಭಿಪ್ರಾಯ ಶಮನಗೊಳಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಮ್ಮ ನಿವಾಸದಲ್ಲಿ ಶಾಸಕರೊಂದಿಗೆ ಚರ್ಚಿಸಿ
ಮೈತ್ರಿ ಮಾತುಕತೆ ನಡೆಸಿದ್ದಾರೆ. ಒಂದೊಮ್ಮೆ ಮೈತ್ರಿಯಾದರೆ ಏನು ಮಾಡಬೇಕು.ಆಗದಿದ್ದರೆ ಏನೆಲ್ಲಾ ತಂತ್ರ ರೂಪಿಸಬೇಕೆನ್ನುವ ಬಗ್ಗೆ ಗೌಡರು ಶಾಸಕರಿಗೆ ಸೂಚನೆ ನೀಡಿದ್ದಾರೆ.
ಇದಕ್ಕೆ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಅದನ್ನು ಎಲ್ಲರೂ ಪಾಲಿಸುವಂತಾಗಬೇಕೆಂದು ಗೌಡರು ಚಲುವರಾಯಸ್ವಾಮಿ, ಗೋಪಾಲಯ್ಯ, ಜಮೀರ್, ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ಕೆಲವು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಚಲುವರಾಯಸ್ವಾಮಿ, ಮೈತ್ರಿ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಸಭೆ ನಡೆಸಲಾಗಿದ್ದು, ಅವರಿಂದ ಸಲಹೆ, ಸೂಚನೆ
ಪಡೆದಿದ್ದೇವೆ. ಇನ್ನೂ 4 ದಿನಗಳವರೆಗೂ ಕಾಂಗ್ರೆಸ್ ನಿರ್ಧಾರವನ್ನು ಕಾಯುವುದಕ್ಕೆ ಪಕ್ಷ ತೀರ್ಮಾನಿಸಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics