ಮರಿ ತಿಬ್ಬೇಗೌಡ 
ರಾಜಕೀಯ

ಈಶ್ವರಪ್ಪ ಹೇಳಿಕೆಗೆ ಮೇಲ್ಮನೆಯಲ್ಲಿ ಕೋಲಾಹಲ

ಪ್ರತಿಪಕ್ಷ ನಾಯಕರ ಹೇಳಿಕೆಯನ್ನು ಕಡತದಿಂದ ತೆಗೆಯಿರಿ ಎಂಬ ಸಭಾಪತಿಯವರ ಆದೇಶ ಮೇಲ್ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತಲ್ಲದೇ, ತೀವ್ರ ಗದ್ದಲದ....

ವಿಧಾನ ಪರಿಷತ್ : ಪ್ರತಿಪಕ್ಷ ನಾಯಕರ ಹೇಳಿಕೆಯನ್ನು ಕಡತದಿಂದ ತೆಗೆಯಿರಿ ಎಂಬ ಸಭಾಪತಿಯವರ ಆದೇಶ ಮೇಲ್ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತಲ್ಲದೇ, ತೀವ್ರ ಗದ್ದಲದ ನಡುವೆ ಕಲಾಪ ಶುಕ್ರವಾರಕ್ಕೆ ಮುಂದೂಡಲ್ಪಟ್ಟಿತು.

ಆಗಿದ್ದಿಷ್ಟು: `ರಾಜ್ಯದಲ್ಲಿ ಭಾರತ್ ಮಾತಾಕೀ ಜೈ ಎಂದವರನ್ನು ಪೊಲೀಸರು ಜೈಲಿಗೆ ಕಳುಹಿಸುತ್ತಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದವರಿಗೆ ಬೇಲ್ ಸಿಗುತ್ತಿದೆ, ಏನಾಗುತ್ತಿದೆ? ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾವೆಲ್ಲಾ ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದ್ದಕ್ಕೆ ಜೈಲಿಗೆ ಕಳುಹಿಸಲಾಗಿತ್ತು' ಎಂದು ಪ್ರತಿಪಕ್ಷ ನಾಯಕ ಈಶ್ವರಪ್ಪ ಹೇಳಿದರು.

ಕೊಡಗು ಘಟನೆ ಖಂಡಿಸಿ ಹಾಸನದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರೊಬ್ಬರು ಬೈಕ್ ರ್ಯಾಲಿ ನಡೆಸಲು ಮುಂದಾಗಿದ್ದರು. ಅವರು ಭಾರತ್ ಮಾತಾಕಿ ಜೈ ಘೋಷಣೆ ಕೂಗಿದ್ದಕ್ಕೆ ಅವರನ್ನು ಬಂಧಿಸಲಾಯಿತು. ಶಿವಮೊಗ್ಗದಲ್ಲಿ ಕೆಎಫ್ ಡಿ ಸಂಘಟನೆ ಸಮಾವೇಶದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಬೇಲ್ ಸಿಗುತ್ತದೆ ಎಂದು ವ್ಯಂಗ್ಯವಾಡಿದರು.

ಈ ವೇಳೆ ಕಾಂಗ್ರೆಸ್‍ನ ವಿ.ಎಸ್. ಉಗ್ರಪ್ಪ, ಈ ರೀತಿ ಹೇಳಿಕೆ ಸರಿಯಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಯಾರನ್ನೂ ಜೈಲಿಗೆ ಹಾಕಿಲ್ಲ. ಪ್ರತಿಪಕ್ಷ ನಾಯಕರು ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ, ಸಭಾಪತಿ ಸ್ಥಾನದಲ್ಲಿದ್ದ ಮರಿತಿಬ್ಬೇಗೌಡ ಅವರು, ಪ್ರತಿಪಕ್ಷ ನಾಯಕರು ಹೇಳಿದ ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದ್ದಕ್ಕಾಗಿ ಪೊಲೀಸರು ಜೈಲಿಗೆ ಹಾಕಿದ್ದಾರೆ ಎಂಬ ಪದಗಳನ್ನು ಕಡತದಿಂದ ತೆಗೆಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಕ್ಷಣವೇ ಕೆರಳಿಬಿದ್ದ ಪ್ರತಿಪಕ್ಷ ಸದಸ್ಯರು, ಇದೇನು ಅಸಂವಿಧಾನಿಕ ಪದವಲ್ಲ. ಹೀಗೆ ಕಡತದಿಂದ ತೆಗೆಯುವುದಕ್ಕೆ ನಮ್ಮ ವಿರೋಧವಿದೆ ಎಂದು ಈಶ್ವರಪ್ಪ ನೇತೃತ್ವದಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ನಮ್ಮನ್ನು ಭಾರತ್ ಮಾತಾಕೀ ಜೈ ಎಂದಿದ್ದಕ್ಕಾಗಿಯೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿಸಲಾಗಿತ್ತು ಎಂದು ಈಶ್ವರಪ್ಪ ಮತ್ತು ಪ್ರೊ. ಕೃಷ್ಣಭಟ್ ಹೇಳಿದರು.

ಒಂದು ಹಂತದಲ್ಲಿ ಆಕ್ರೋಶಗೊಂಡ ಬಿಜೆಪಿ ಸದಸ್ಯ ನಾರಾಯಣ ಸಾ ಭಾಂಡಗೆ ಸಭಾಪತಿ ಪೀಠದ ಟೇಬಲ್ ಬಡಿದು ಅಸಮಾಧಾನ ವ್ಯಕ್ತಪಡಿಸಿ ಕ್ಷಮೆ ಕೋರಬೇಕೆಂದು ಪಟ್ಟು ಹಿಡಿದರು. ಕಾಂಗ್ರೆಸ್ ಸದಸ್ಯ ರು ಮತ್ತು ಬಿಜೆಪಿ ಸದಸ್ಯರು ಪ್ರತ್ಯೇಕವಾಗಿ ಘೋಷಣೆ ಮೊಳಗಿಸಿದ್ದರಿಂದ ಕೋಲಾಹಲ ಹೆಚ್ಚಿ ಸದನವನ್ನು 15 ನಿಮಿಷ ಮುಂದೂಡಲಾಯಿತು. ಸದನ ಪುನರಾರಂಭವಾದಾಗ ಉಪ ಸಭಾಪತಿ ಮರಿತಿಬ್ಬೇಗೌಡರು ತಮ್ಮ ವಾದವನ್ನು ಸಮರ್ಥಿಸಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಕೆ.ಎಸ್. ಈಶ್ವರಪ್ಪ, ನಿಮ್ಮ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರಲ್ಲದೇ, ತಮ್ಮ ಹೇಳಿಕೆಗೆ ಮತ್ತೆ ಬದ್ಧ ಎಂದು ಘೋಷಿಸಿದರು. ಇದರಿಂದ ಕ್ರುದ್ಧರಾದ ಮರಿತಿಬ್ಬೇಗೌಡ, ನೀವು ಎಷ್ಟೇ ಸರಿ ಹೇಳಿದರೂ ಕಡತದಿಂದ ತೆಗೆದು ಹಾಕಲಾಗುವುದು ಎಂದರು. ಮತ್ತೂ ಅಸಮಾಧಾನಗೊಂಡ ಈಶ್ವರಪ್ಪ, ನಾವು ನೂರಲ್ಲ ಸಾವಿರಬಾರಿ ಅದನ್ನೇ ಹೇಳುವುದು. ಜೈಲಿಗೆ ಕಳುಹಿಸಿದರೂ ಸರಿಯೇ ಎಂದು ಮತ್ತೆ ಧರಣಿ ಮುಂದುವರಿಸಿದರು.

ಪರಿಸ್ಥಿತಿ ಕೈಮೀರಿದ ಹಂತ ತಲುಪಿದಾಗ ಸದನವನ್ನು ಶುಕ್ರವಾರ ಬೆಳಗ್ಗೆಗೆ ಮುಂದೂಡಲಾಯಿತು. ಅಚ್ಚರಿ ಎಂದರೆ ಪ್ರತಿಪಕ್ಷದ ಕೆಲವು ಸದಸ್ಯರು ಸಭಾಪತಿಯವರ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT