ಕುಮಾರಸ್ವಾಮಿ ಕ್ಷಮೆಯಾಚಿಸಲಿ
ಪಕ್ಷದ ಒಳಿತಿಗಾಗಿ ಶ್ರಮಿಸಿದ ನಮ್ಮನ್ನು ನಿಂದಿಸಿರುವ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು. ಇಲ್ಲವೇ ನಮ್ಮನ್ನು ಪಕ್ಷದಿಂದ...
ಬೆಂಗಳೂರು: ಪಕ್ಷದ ಒಳಿತಿಗಾಗಿ ಶ್ರಮಿಸಿದ ನಮ್ಮನ್ನು ನಿಂದಿಸಿರುವ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು. ಇಲ್ಲವೇ ನಮ್ಮನ್ನು ಪಕ್ಷದಿಂದ ತೆಗೆಯಬೇಕು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.
ಏಜೆಂಟರು ಎಂದು ನಿಂದಿಸುವುದಾದರೇ ನಾವು ಯಾರಿಗಾಗಿ ಕೆಲಸ ಮಾಡುತ್ತಿದ್ದೇವೆ? ಕೂಡಲೇ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ನನ್ನ ಸೂಚನೆಗೆ ವಿರುದ್ಧವಾಗಿ ನಡೆದುಕೊಂಡಿದ್ದೀರಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಮ್ಮ ವಿರುದ್ಧ ಕ್ರಮಕ್ಕೆ ಆದೇಶಿಸಬೇಕು. ಇದನ್ನಾಧರಿಸಿ ಕುಮಾರಸ್ವಾಮಿ ಅವರು ಮೈತ್ರಿಗೆ ಯತ್ನಿಸದ ಎಲ್ಲಾ ಶಾಸಕರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮೈತ್ರಿ ಮಾತುಕತೆ ಸಂದರ್ಭದಲ್ಲಿ ಕುಮಾರಸ್ವಾಮಿ ಆಕ್ಷೇಪದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ. ಆದ್ದರಿಂದಲೇ ನಾವು ಮಾತುಕತೆಗೆ ಮುಂದಾಗಿದ್ದೇವೆ. ಹೀಗಾಗಿ ಈಗ ತಲೆ ಎತ್ತಿರುವ ಗೊಂದಲ ಬಗ್ಗೆ ದೇವೇಗೌಡರೇ ಉತ್ತರ ನೀಡಬೇಕು. ಇಲ್ಲವಾದರೆ ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಎಂದು ಅವರು ಹೇಳಿದ್ದಾರೆ.
ಇಷ್ಟು ವರ್ಷ ಕಾರ್ಯಕರ್ತರ ಬಗ್ಗೆ ಮಾತನಾಡದ ಕುಮಾರಸ್ವಾಮಿ ಈಗ ಕಾರ್ಯಕರ್ತರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಅವರು ನಮ್ಮನ್ನು ಪಕ್ಷದಿಂದ ಹೊರ ಹಾಕಿದರೂ ಸರಿ ಕಾರ್ಯಕರ್ತರಿಗೆ ಆದ್ಯತೆ ನೀಡಲಿ. ಶ್ರಮಿಸಿದವರಿಗೆ ಅವಕಾಶ ನೀಡಲಿ ಎಂದು ಟಾಂಗ್ ನೀಡಿದ್ದಾರೆ ಶಾಸಕ ಬಾಲಕೃಷ್ಣ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.