ಬೆಂಗಳೂರು: ಹೌದು. ಎಲ್ಲಾ ಪಕ್ಷದಲ್ಲಿಯೂ ಇರುವಂತೆ ನಮ್ಮ ಪಕ್ಷದಲ್ಲೂ ಸಮಸ್ಯೆ ಇದೆ. ಅದನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನ ಮತ್ತು ಕೆಲವು ಶಾಸಕರನ್ನು ನಿಂದಿಸಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಜತೆ ಸೋಮವಾರ ಬೆಳಗ್ಗೆ ಚರ್ಚೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಹೌದು ನಮ್ಮಲ್ಲಿ ಸಮಸ್ಯೆ ಇದೆ. ಅದನ್ನು ಪರಿಹರಿಸುವುದಕ್ಕಾಗಿಯೇ ಶಾಸಕರ ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ ಎಂದರು. ಡಿ.3ರಂದು ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ.
ಅದಕ್ಕೂ ಮುನ್ನ ಮತ್ತೊಂದು ಕಡೆ ಶಾಸಕರು, ಪರಿಷತ್ ಸದಸ್ಯರು ಮತ್ತು ಮುಖಂಡರು ಸಭೆ ಕರೆಯಲಾಗಿದೆ. ಎಲ್ಲರೂ ಮುಕ್ತವಾಗಿ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics