ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

9, 10ರಂದು ರಾಜ್ಯಕ್ಕೆ ರಾಹುಲ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‍ಗಾಂಧಿಯವರು ಅ.9 ಮತ್ತು 10ರಂದು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ಈ ವೇಳೆ ಪಾದ ಯಾತ್ರೆಯನ್ನೂ ಮಾಡಲಿದ್ದಾರೆ...

ರಾಹುಲ್ ಗಾಂಧಿ
Vishwanath S
Updated On : 6 Oct 2015, 11:23 am
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‍ಗಾಂಧಿಯವರು ಅ.9 ಮತ್ತು 10ರಂದು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, ಈ ವೇಳೆ ಪಾದ ಯಾತ್ರೆಯನ್ನೂ ಮಾಡಲಿದ್ದಾರೆ. 
ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅ.9ರಂದು ಬೆಳಗ್ಗೆ ಮಂಡ್ಯಕ್ಕೆ ತೆರಳುವ ರಾಹುಲ್ ಗಾಂಧಿಯವರು, ಮಧ್ಯಾಹ್ನದವರೆಗೆ ಮೃತ ರೈತರ ಮನೆಗಳಿಗೆ ತೆರಳಿ ಸಾಂತ್ವನ ಹೇಳಲಿದ್ದಾರೆ. ಇದೇ ವೇಳೆ ರೈತರ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದು ವಿವರಿಸಿದರು. 
ನಂತರ ಬೆಂಗಳೂರಿಗೆ ಆಗಮಿಸುವ ಅವರು ಮಧ್ಯಾಹ್ನ ಅರಮನೆ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ, ಅಧ್ಯಕ್ಷ ಉಪಾಧ್ಯಕ್ಷರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದಾದ ತರುವಾಯ ಪಕ್ಷದ ಸಾಮಾನ್ಯ ಸಭೆಯನ್ನು ಮುನ್ನಡೆಸಲಿದ್ದಾರೆ. ಅ.10ರಂದು ಹಾವೇರಿ ಜಿಲ್ಲೆ ರಾಣಿ ಬೆನ್ನೂರಿಗೆ ತೆರಳಿ, ಅಲ್ಲಿನ ಆತ್ಮಹತ್ಯೆ ಮಾಡಿಕೊಂಡ ಕೆಲವು ರೈತರ ಮನೆ ಗಳಿಗೆ ಭೇಟಿ ನೀಡಲಿದ್ದಾರೆ ಎಂದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments