ಗೃಹ ಸಚಿವ ಕೆಜೆ ಜಾರ್ಜ್ 
ರಾಜಕೀಯ

ನೋಟಿಸ್‍ಗೆ ಬೆದರಿದ ಸಚಿವರು ಠಾಣೆಗಳಿಗೆ ಹಾಜರಾದರು

ಮಡಿವಾಳದಲ್ಲಿ ಟೆಂಪೋ ಟ್ರಾವೆಲರ್‍ನಲ್ಲಿ ಬಿಪಿಒ ಉದ್ಯೋಗಿ ಮೇಲೆ ಗ್ಯಾಂಗ್ ಗ್ಯಾಂಗ್ ರೇಪ್ ಹಾಗೂ ಚಿಕ್ಕ ಜಾಲದಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆ...

ಬೆಂಗಳೂರು: ಮಡಿವಾಳದಲ್ಲಿ ಟೆಂಪೋ ಟ್ರಾವೆಲರ್‍ನಲ್ಲಿ ಬಿಪಿಒ ಉದ್ಯೋಗಿ ಮೇಲೆ ಗ್ಯಾಂಗ್ ಗ್ಯಾಂಗ್ ರೇಪ್ ಹಾಗೂ ಚಿಕ್ಕ ಜಾಲದಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಕೆಜೆ ಜಾರ್ಜ್ ಶುಕ್ರವಾರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ  ಸಚಿವ ಜಾರ್ಜ್ ಠಾಣೆಗಳಿಗೆ ಭೇಟಿ ನೀಡಿದ್ದಾರೆ. ಬೆಳಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಈಶಾನ್ಯ ವಿಭಾಗ ಡಿಸಿಪಿ ವಿಕಾಸ್ ಕುಮಾರ್ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಜತೆ ಮಾತನಾಡಿದ ಸಚಿವರು, ಸುಭಾಶ್ ನಗರದ ಬಾಲಕಿ ಸಂಗೀತಾ (15) ಆತ್ಮಹತ್ಯೆ  ಪ್ರಕರಣದ ಬಗ್ಗೆ ಮಾಹಿತಿ ಕೇಳಿದರು. ನೆರಮನೆಯಯುವಕರು ಅಪಹರಿಸಿಕೊಂಡು ಹೋಗಿ ವಿವಸ್ತ್ರಉಗೊಳಿಸಿ ಮೊಬೈಲ್ ಫೋನ್‍ನಲ್ಲಿ ಫೋಟೋ ತೆಗೆದುಕೊಂಡಿದ್ದರಿಂದ ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿ ದ್ದಾಳೆಂದು ಪಾಲಕರು ಆರೋಪಿಸಿದ್ದಾರೆ.
ಅದಕ್ಕೂ ಮೊದಲೇ ಬಾಲಕಿ ಹಾಗೂ ಪಾಲಕರು ಠಾಣೆಗೆ ಬಂದು ದೂರು ನೀಡಿದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಜಾರ್ಜ್ ಪ್ರಶ್ನಿಸಿದರು. ಮೊದಲ ಬಾರಿ ಠಾಣೆಗೆ ದೂರು  ನೀಡಲು ಬಂದಾಗ ನಿಯಮದಂತೆ ಎನ್ ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಎರಡು ಕಡೆಯವರನ್ನು ಮಾತನಾಡಿಸಿ ಮುಂದೆ ಜಗಳ ಮಾಡಿಕೊಳ್ಳದಂತೆ ಹೇಳಿ ಕಳುಹಿಸಲಾಗಿತ್ತು. ಹೀಗಾಗಿ, ಕಾನೂನು ಪ್ರಕ್ರಿಯೆ ನಡೆಸಿದ್ದಾಗಿ ಪೊಲೀಸರು ಸ್ಪಷ್ಟನೆ ನೀಡಿದರು. ಮರುದಿನ ಬಾಲಕಿ ಶಾಲೆ ಮುಗಿಸಿಕೊಂಡು ಮನೆಗೆ ಬರುವಾಗ ಆಕೆಯನ್ನು ಅಪಹರಿಸಿ ಫೋಟೋ ಕ್ಲಿಕ್ಕಿಸಿದ್ದಾರೆಂದು ಹೇಳಲಾಗಿದೆ. ಆದರೆ ಈ ಬಗ್ಗೆ ಠಾಣೆಗೆ ಬಂದು ದೂರು ನೀಡುವ ಬದಲು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಪ್ರಕರಣ ದಾಖಲಿಸಿಕೊಂಡು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಕೆ.ಜೆ.ಜಾರ್ಜ್, ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳಬಾರದಿತ್ತು. ಆದರೆ,
ದುಡುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಠಿಣ ಕ್ರಮ: ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಕಡೆ ನಡೆದ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅ„ಕಾರಿಗಳಿಗೆ ಸೂಚಿಸಲಾಗಿದೆ. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರಕರಣಗಳಲ್ಲಿನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದಲ್ಲಿ ಸೂಕ್ತ ಶಿಕ್ಷೆಯಾಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಅತ್ಯಾಚಾರ ಪ್ರಕರಣಗಳು ಖಂಡನೀಯ. ಇಂತಹ ಪ್ರಕರಣಗಳ ಶೀಘ್ರ ವಿಚಾರಣೆ  ಪೂರ್ಣಗೊಳ್ಳಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದ. ಅವರಿಗೆ ಕಠಿಣ ಶಿಕ್ಷೆಯಾಗುವಂತಹ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಜಾರ್ಜ್ ಹೇಳಿದರು. 
ಸಾಮೂಹಿಕ ಅತ್ಯಾಚಾರ: ಮಾಹಿತಿ ಪಡೆದ ಸಚಿವರು ಬಿಪಿಒ ಉದ್ಯೋಗಿ ಮೇಲೆ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಮಡಿವಾಳ ಠಾಣೆಗೆ ಭೇಟಿ ನೀಡಿ ಅ„ಕಾರಿ ಮತ್ತು ಸಿಬ್ಬಂದಿಯಿಂದ ಪ್ರಕರಣದ ಬಗ್ಗೆಮಾಹಿತಿ ಸಂಗ್ರಹಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್,  ಮಡಿವಾಳದಲ್ಲಿ ನಡೆದಿರುವುದು ಸಾಮೂಹಿಕ ಅತ್ಯಾಚಾರ
ಪ್ರಕರಣ. ಗ್ಯಾಂಗ್ ರೇಪ್ ಆಗಿರುವ ಕಾರಣ 376ಡಿ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದರು. ತೀರ್ಥಹಳ್ಳಿ ನಂದಿತಾ ಸಾವು ಪ್ರಕರಣದಲ್ಲಿ ರಾಷ್ಟ್ರೀಯ ಮಾಧ್ಯಮಗಳು ಅತ್ಯಾಚಾರ ಹಾಗೂ ಕೊಲೆ ಎಂದು
ಬಿಂಬಿಸಿದ್ದವು. ಚಾನಲ್‍ಗಳು ಟಿಆರ್‍ಪಿಗಾಗಿ ಸಾಮಾನ್ಯ ಪ್ರಕರಣಗಳನ್ನು ಗಂಭೀರ ಪ್ರಕರಣಗಳಂತೆ ಬಿಂಬಿಸಿ ಪ್ರಸಾರ ಮಾಡುತ್ತವೆ ಎಂದು ಹೇಳಿದ್ದೆ. ಅಂತಿಮವಾಗಿ ತನಿಖೆ ಪೂರ್ಣಗೊಂಡಾಗ ನಂದಿತಾಳದ್ದು ಅತ್ಯಾಚಾರ ಹಾಗೂ ಕೊಲೆ ಅಲ್ಲ ಎನ್ನುವುದು ಖಚಿತವಾಗಿತ್ತು ಎಂದು ಜಾರ್ಜ್ ಹೇಳಿದರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸ್ ನೇಮಕಾತಿ ನಡೆಯುತ್ತಿದೆ. ಈಗಾಗಲೇ ಸಾವಿರಾರು ಪೊಲೀಸ್ ಸಿಬ್ಬಂದಿ
ನೇಮಕವಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ 4ರಿಂದ 5 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರ್.
ಅಶೋಕ್ ಗೃಹಮಂತ್ರಿ ಆಗಿದ್ದಾಗ ನೇಮಕಾತಿ ಪ್ರಕ್ರಿಯೆಗೆ ಕೈ ಹಾಕಿರಲಿಲ್ಲ. ಆದರೆ ಈಗ ಕಾಂಗ್ರೆಸ್ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವುದು ಸರಿಯಲ್ಲ ಎಂದು ಜಾರ್ಜ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ