ಬೆಂಗಳೂರು: ಡಾ.ಡಿ.ಎಂ.ನಂಜುಂಡಪ್ಪ ವರದಿ ಅನ್ವಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನಕ್ಕಾಗಿ ನ್ಯಾಯಾಂಗ ಸಮಿತಿ ರಚಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. 1995ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರಾಗಿದ್ದರು. ಆನಂತರ ಜೆ.ಎಚ್ .ಪಟೇಲ್ ಮತ್ತು ಧರ್ಮಸಿಂಗ್ ಕಾಲದಲ್ಲೂ ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದವರು. ಆದ್ದರಿಂದ ಆ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎಷ್ಟೆಲ್ಲಾ ಅನುದಾನನೀಡಲಾಗಿದೆ. ಏನೆಲ್ಲಾ ಅಭಿವೃದ್ಧಿಯಾಗಿದೆ ಎನ್ನುವುದು ಸಿದ್ದರಾಮಯ್ಯ ಅವರಿಗೇ ಚೆನ್ನಾಗಿ ಗೊತ್ತಿದೆ. ಆದ್ದರಿಂದ 1995ರಿಂದ ಈ ತನಕ ಯಾವ ಸರ್ಕಾರ ಎಷ್ಟೆಷ್ಟು ಅನುದಾನ ನೀಡಿದೆ ಎನ್ನುವುದನ್ನು ಅಂಕಿಅಂಶ ಸಹಿತ ತಿಳಿದು ಆ ಭಾಗಕ್ಕೆ ಕ್ರಿಯಾ ಯೋಜನೆಗಳನ್ನು ರೂಪಿಸಲು ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯೊಂದನ್ನು ರಚಿಸಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗಕ್ಕೆ ದೇವೇಗೌಡರ ಕೊಡುಗೆ ಏನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಪದೇಪದೇ ಪ್ರಶ್ನಿಸುವ ಮೂಲಕ ಆ ಜನರಲ್ಲಿ ಅನುಮಾನ ಮೂಡಿಸುವಂತೆ ಮಾಡುತ್ತಿದ್ದಾರೆ. ಅವರು ರಾಜಕೀಯ ಲಾಭಕ್ಕಾಗಿ ನನ್ನ ವಿರುದ್ಧ ಸ್ವೇಚ್ಛಾಚಾರದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ತನ್ನ ಅಧಿಕಾರ ಅವಧಿ ನೀಡಿದ್ದ ಕೊಡುಗೆಗಿಂತ ಹೆಚ್ಚಿನ ನೆರವು, ಅನುದಾನವನ್ನು ಇತರ ಸರ್ಕಾರಗಳ ಅವಧಿಯಲ್ಲಿ ನೀಡಲಾಗಿದೆ. ಆದರೆ ಜೋಶಿ ಹಸಿ ಸುಳ್ಳು ಹೇಳಿ ಅದನ್ನು ಸತ್ಯ ಮಾಡಲು ಹೊರಟಿದ್ದಾರೆ. ಆದ್ದರಿಂದ ಸತ್ಯ ತಿಳಿಸಲು ಸರ್ಕಾರ ಮುಂದಾಗಬೇಕು ಎಂದು ದೇವೇಗೌಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics