ಬೆಂಗಳೂರು: ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ 30 ಜಿಲ್ಲೆಗಳಲ್ಲಿಯೂ ಸ್ಪರ್ಧಿಸಲಿದ್ದಾರೆ. ವಿಜಯ ದಶಮಿ ನಂತರ ಬೆಳಗಾವಿ ಪ್ರವಾಸ ಕೈಗೊಳ್ಳುವುದಾಗಿ ಎಚ್.ಡಿ. ದೇವೇಗೌಡ ಹೇಳಿದರು. ಎಲ್ಲೆಲ್ಲಿ ಜೆಡಿಎಸ್ ಪ್ರಬಲವಾಗಿಲ್ಲವೋ ಅಂತಹ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟನೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಬೆಳಗಾವಿ ಸೇರಿದಂತೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಮಂಗಳೂರಿನಲ್ಲಿಯೂ ಪ್ರವಾಸ ಕೈಗೊಳ್ಳಲಾಗುವುದು ಎಂದರು.ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಹಾಗೂ ಪಕ್ಷದ ಸದಸ್ಯತ್ವ ಪಡೆಯದವರಿಗೆ ಯಾವುದೇ ಕಾರಣಕ್ಕೂ ಜಿಪಂ, ತಾಪಂ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ . ಶಾಸಕರು ಚೆನ್ನಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಸುಪ್ರೀಂ ತೀರ್ಪು ಸ್ವಾಗತಾರ್ಹ: ಇದೇ ಸಂದರ್ಭದಲ್ಲಿ ಕೊಲಿಜಿಯಂ ಕುರಿತು ಮಾತನಾಡಿ, ಹೆಚ್ಚಿನ ನ್ಯಾಯಾಧೀಶರು ನಿವೃತ್ತಿ ಸಮಯ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರಕ್ಕೆ ಮುಂದಾಗುತ್ತಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋ(ಎನ್‍ಜೆಎಸಿ) ಅಸಿಂಧು ಎಂದು ಸುಪ್ರೀಂಕೋರ್ಟ್ ಪ್ರಕಟಿಸಿರುವ ನಿರ್ಧಾರ ಸ್ವಾಗತಾರ್ಹ ಎಂದರು.