ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಜೈಲಿನಲ್ಲಿರುವ ಬಿಹಾರದ ಶಾಸಕ
ಜೈಲಿನಲ್ಲಿರುವ ಬಿಹಾರದ ಶಾಸಕನ ವಿರುದ್ಧ ಪೊಲೀಸರಿಗೆ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ.
ಪಾಟ್ನ: ಜೈಲಿನಲ್ಲಿರುವ ಬಿಹಾರದ ಶಾಸಕನ ವಿರುದ್ಧ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ.
ಪೊಲೀಸರಿಗೆ ಬೆದರಿಕೆ ಹಾಕಿರುವ ಶಾಸಕ ಬಿಹಾರದ ಚುನಾವಣೆಗೆ ಸ್ಪರ್ಧಿಸಿದ್ದು, ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಬಿಹಾರದ ಉಪವಿಭಾಗೀಯ ಪೊಲೀಸ್ ಅಧಿಕಾರಿ ಮನೋಜ್ ತಿವಾರಿ ಆರೋಪಿಸಿದ್ದಾರೆ.
ಬಿಹಾರ ಶಾಸಕ ಅನಂತ್ ಸಿಂಗ್, ಚುನಾವಣೆಗೆ ಸ್ಪರ್ಧಿಸಿದ್ದು ಪ್ರಚಾರದ ವೇಳೆ ತಮ್ಮ ಬೆಂಬಲಿಗರಿಗೆ ಮುಕ್ತ ಅವಕಾಶ ನೀಡಬೇಕು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದರೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಅನಂತ್ ಸಿಂಗ್ ಉಪವಿಭಾಗಾಧಿಕಾರಿಗೆ ತಾಕೀತು ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶಾಸಕ ಅನಂತ್ ಸಿಂಗ್ ಅಪಹರಣ ಹಾಗು ಕೊಲೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.