ಗೋವಿಂದ ಕಾರಜೋಳ 
ರಾಜಕೀಯ

ರಾಜಕೀಯದಲ್ಲಿರಲು ಕೇಂದ್ರ ಸಚಿವ ವಿ.ಕೆ.ಸಿಂಗ್ ಅನರ್ಹ

ದಲಿತರನ್ನು ನಾಯಿಗೆ ಹೋಲಿಸಿದ ಕೇಂದ್ರ ಸಚಿವ ವಿ.ಕೆ. ಸಿಂಗ್ ಸಚಿವ ಸಂಪುಟದಲ್ಲಿ ಇರಲು ಅರ್ಹರಲ್ಲ. ಅವರು ರಾಜಕೀಯದಿಂದಲೇ ದೂರಉಳಿಯುವುದು ..

 ಹುಬ್ಬಳ್ಳಿ/ಹಾವೇರಿ: ದಲಿತರನ್ನು ನಾಯಿಗೆ ಹೋಲಿಸಿದ ಕೇಂದ್ರ ಸಚಿವ ವಿ.ಕೆ. ಸಿಂಗ್ ಸಚಿವ ಸಂಪುಟದಲ್ಲಿ ಇರಲು ಅರ್ಹರಲ್ಲ. ಅವರು ರಾಜಕೀಯದಿಂದಲೇ ದೂರಉಳಿಯುವುದು ಒಳ್ಳೆಯದು ಎಂದು ಬಿಜೆಪಿ ಶಾಸಕ ಗೋವಿಂದ ಕಾರಜೋಳ ತಮ್ಮದೇ ಪಕ್ಷದ ಕೇಂದ್ರ ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಬುಧವಾರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನುಷ್ಯನನ್ನು ಮನುಷ್ಯನನ್ನಾಗಿ ನೋಡದವರು ರಾಜಕಾರಣದಲ್ಲಿ ಇರಬಾರದು ಎಂದರು. ದಲಿತ ಪ್ರಧಾನಿ ಬಗ್ಗೆ ಪ್ರಶ್ನೆ ಎದುರಾದಾಗಲೂ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಸರದಿ ಬಂದಾಗ ಕೇಂದ್ರದಲ್ಲೂ ದಲಿತರು ಪ್ರಧಾನಿಯಾಗುತ್ತಾರೆ. ದೇಶಕ್ಕೆ ಅಮೂಲ್ಯವಾದ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರನ್ನೇ ಸೋಲಿಸುವ ನೀಚ ಕೆಲಸ ಮಾಡಿದ ಕಾಂಗ್ರೆಸ್‍ಗೆ ದಲಿತರ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು. ಅಹಿಂದ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರದಲಿತರಿಗೆ ಸೌಲಭ್ಯ ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT