ಪುರಭವನದ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ 
ರಾಜಕೀಯ

ಜೆಡಿಎಸ್ ಜತೆ ಮೈತ್ರಿ: 'ಕೈ' ನಾಯಕರನ್ನು ಸನ್ನಿ ಲಿಯೋನ್‌ಗೆ ಹೋಲಿಸಿದ ಜಗ್ಗೇಶ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಬಿಜೆಪಿ ವಿಧಾನ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ನಟ ಜಗ್ಗೇಶ್ ಅವರು, ನೀಲಿ ತಾರೆ ಸನ್ನಿ ಲಿಯೋನ್‌ಗೆ ಹೋಲಿಸಿದ್ದಾರೆ.

ಜೆಡಿಎಸ್‌ ಜತೆ ಸೇರಿ ಬಿಬಿಎಂಪಿಯಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಇಂದು ಬಿಜೆಪಿ ಪುರಭವನದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಜಗ್ಗೇಶ್‌, ಕಾಂಗ್ರೆಸ್‌‌ ಹಾಗೂ ಜೆಡಿಎಸ್‌ ವಿರುದ್ದ ವಾಗ್ಧಾಳಿ  ನಡೆಸಿದರು. ಅಲ್ಲದೆ ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು.

ಕಾಂಗ್ರೆಸ್‌ ನಾಯಕರು ಸನ್ನಿಲಿಯೋನ್‌ ರಂತೆ , ಅವಳಿಗೂ ಅಭಿಮಾನಿಗಳಿದ್ದಾರೆ. ನಿಮ್ಮ ಎಲ್ಲಾ  ಚಟುವಟಿಕೆಗಳನ್ನು ಜನ ನೋಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಹೇಳ ಹೆಸರಿಲ್ಲದಂತೆ ಮಾಯವಾಗುತ್ತದೆ ಎಂದರು.

ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ಬೆಂಗಳೂರಿನ ಶಾಸಕರು, ಪಕ್ಷದ ಪದಾಧಿಕಾರಿಗಳು, ಬಿಬಿಎಂಪಿ ಸದಸ್ಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!