ಮೈತ್ರಿ ವಿಚಾರದಲ್ಲಿ ಭಿನ್ನಾಭಿಪ್ರಾಯವಿಲ್ಲ
ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ...
ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನದಂತೆ
ನಿರ್ಧರಿಸಲಾಗಿದೆ. ಅದಕ್ಕೆ ಪಕ್ಷದ ಮುಖಂಡರೆಲ್ಲರೂ ಬದ್ಧ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನೊಂದಿಗಿನ ಮೈತ್ರಿ ಬಗ್ಗೆ ಭಿನ್ನಾಭಿಪ್ರಾಯಗಳಿವೆ ಎಂಬುದು ವದಂತಿಯಷ್ಟೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಬಿಬಿಎಂಪಿ ಮೈತ್ರಿ ತಮಗೆ ಸೇರಿದ್ದಲ್ಲ, ಅದನ್ನು ಕಾಂಗ್ರೆಸ್ನ ಸ್ಥಳೀಯ ನಾಯಕರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದರಿಂದ ಯಾರ ಜತೆಗೂ ಮಾತುಕತೆ ಬೇಡ ಎಂದು ಸುಮ್ಮನಾಗಿದ್ದೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.