ರಾಜಕೀಯ

ಜೆಡಿಎಸ್ ಶಾಸಕರಿಂದ ಸಿಎಂ ಭೇಟಿ, 3 ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆ

Lingaraj Badiger

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೂರು ಸ್ಥಾಯಿ ಸಮಿತಿ ಸ್ಥಾನಕ್ಕೆ ಬೇಡಿಕೆಯಿಟ್ಟಿದೆ.

ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಜೆಡಿಎಸ್ ಶಾಸಕರಾದ, ಜಮೀರ್ ಅಹ್ಮದ್ ಖಾನ್, ಕೆ.ಗೋಪಾಲಯ್ಯ ಹಾಗೂ ಅಖಂಡ ಶ್ರೀನಿವಾಸಮೂರ್ತಿ ನೇತೃತ್ವದ ನಿಯೋಗ, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಸಿದರು.

ಸುಮಾರು 20 ನಿಮಿಷಗಳ ಕಾಲ ಬಿಬಿಎಂಪಿಯಲ್ಲಿ ಅಧಿಕಾರಿ ಹಂಚಿಕೆ ಕುರಿತು ಸಿಎಂ ಜತೆ ಚರ್ಚಿಸಿದ ಜೆಡಿಎಸ್ ನಾಯಕರು, ಸ್ಥಾಯಿ ಸಮಿತಿಯಲ್ಲಿ ತಮಗೆ 3 ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.

ನಾಳೆ ಬಿಬಿಎಂಪಿ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

SCROLL FOR NEXT