ಬಿಬಿಎಂಪಿ 
ರಾಜಕೀಯ

ಅಡ್ಡ ಮತದಾನದ ಮೇಲೆ ಪಕ್ಷಗಳ ಕಣ್ಣು

ರಾಜ್ಯ ಸರ್ಕಾರದ ಭವಿಷ್ಯವೆಂದೇ ಬಣ್ಣಿಸಲಾಗಿರುವ ಬಿಬಿಎಂಪಿ ಮೇಯರ್ ಚುನಾವಣೆ ಕ್ಲೈಮಾಕ್ಸ್ ಹಂತಕ್ಕೆ ಬಂದು ನಿಂತಿದೆ. ಕಾಂಗ್ರೆಸ್- ಬಿಜೆಪಿ ನಡುವಿನ ಪ್ರತಿಷ್ಠೆ...

ಬೆಂಗಳೂರು: ರಾಜ್ಯ ಸರ್ಕಾರದ ಭವಿಷ್ಯವೆಂದೇ ಬಣ್ಣಿಸಲಾಗಿರುವ ಬಿಬಿಎಂಪಿ ಮೇಯರ್ ಚುನಾವಣೆ ಕ್ಲೈಮಾಕ್ಸ್ ಹಂತಕ್ಕೆ ಬಂದು ನಿಂತಿದೆ. ಕಾಂಗ್ರೆಸ್- ಬಿಜೆಪಿ ನಡುವಿನ ಪ್ರತಿಷ್ಠೆ
ಪ್ರಶ್ನೆಯಾಗಿರುವ ಮೇಯರ್ ಚುನಾವಣೆ ಈಗ ಕುತೂಹಲಕಾರಿ ಘಟ್ಟ ತಲುಪಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಮಂಜುನಾಥ ರೆಡ್ಡಿ ಮೇಯರ್ ಹಾಗೂ ಜೆಡಿಎಸ್‍ನ ಹೇಮಲತಾ ಉಪ ಮೇಯರ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಆದರೆ ಬಿಜೆಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿರುವುದರಿಂದ ಚುನಾವಣೆ ಜಿದ್ದಾಜಿದ್ದಿನ ಕಣವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ ನಡುವಿನ ಹೋರಾಟಕ್ಕೆ ಶುಕ್ರವಾರ ಬೆಳಗ್ಗೆ 11.30ಕ್ಕೆ ಮೂಹೂರ್ತ ನಿಗದಿಯಾಗಿದೆ.

ಈ ಹೋರಾಟದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಜತೆ ಪ್ರತಿಪಕ್ಷಗಳಲ್ಲೊಂದಾಗಿದ್ದ ಜೆಡಿಎಸ್ ಕೈ ಜೋಡಿಸಿದ್ದರೂ ಬಿಜೆಪಿ ಮಾತ್ರ ಪ್ರಬಲ ಪೈಪೋಟಿ ನೀಡುವ ಮೂಲಕ ಹೋರಾಟ ಕದನ ಕುತೂಹಲ ಕೆರಳುವಂತೆ ಮಾಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಸದಸ್ಯರನ್ನು ಹಾಗೂ ಪಕ್ಷೇತರ 7 ಸದಸ್ಯರನ್ನು ರೆಸಾರ್ಟ್‍ಗಳಿಗೆ ಕರೆದು ಕೊಂಡು ಹೋಗಿ ಅಧಿಕಾರ ಹಿಡಿಯಲು ಬೇಕಾದ ಸದಸ್ಯ ಬಲ ಕಾಯ್ದುಕೊಂಡಿದೆ. ಅಷ್ಟೇ ಅಲ್ಲ. ಚುನಾವಣೆಯ ಕೊನೆ ಕ್ಷಣದವರೆಗೂ ಸಂಖ್ಯಾಬಲ ಕಾಪಾಡಿಕೊಳ್ಳಲು ಅಗತ್ಯವಾದ ಎಲ್ಲ ಕರಸತ್ತು, ತಂತ್ರ ವಿಧಾನ ಗಳನ್ನು ಹೆಣೆದಿದೆ.

ಇನ್ನೂ ಎರಡು ಹೆಜ್ಜೆ ಮುಂದೆ ಹೋಗಿ, ಮೇಯರ್ ಉಪ ಮೇಯರ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಧಿಕಾರ ಹಿಡಿಯಲು ನೆರವಾದ 7 ಮಂದಿ ಪಕ್ಷೇತರರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ನಿರ್ಣಯವನ್ನೂ ಆಂತರಿಕವಾಗಿ ಕೈಗೊಂಡಿದೆ. ಅಡ್ಡ ಮತದಾನದ ಅಡ್ಡ ಪರಿಣಾಮ ಮೇಯರ್ ಚುನಾವಣೆಯಲ್ಲಿ ಯಾವುದೇ ರೀತಿಯ ಕೊನೆ ಕ್ಷಣದ ರಾಜಕೀಯ ಪವಾಡನಡೆದರೆ ಆಶ್ಚರ್ಯವಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ