ಸಿದ್ದರಾಮಯ್ಯ 
ರಾಜಕೀಯ

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ: ಸಿಎಂ

ಸಂಪುಟ ವಿಸ್ತರಣೆ ಬಗ್ಗೆ ಇದೇ ಮೊದಲ ಬಾರಿಗೆ ಗಟ್ಟಿಯಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ಮಾಸಾಂತ್ಯದ ವೇಳೆಗೆ ಪ್ರಕ್ರಿಯೆ...

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಇದೇ ಮೊದಲ ಬಾರಿಗೆ ಗಟ್ಟಿಯಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ಮಾಸಾಂತ್ಯದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಹಾಲಿ ಸಚಿವರು ಮತ್ತು ಆಕಾಂಕ್ಷಿಗಳಲ್ಲಿ  ಚಟುವಟಿಕೆ ಗರಿಗೆದರುವಂತೆ ಮಾಡಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಈ ತಿಂಗಳು ಪ್ರಕ್ರಿಯೆಮುಕ್ತಾಯವಾಗುತ್ತದೆ ಎಂದು ಹೇಳಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ತಿಂಗಳಲ್ಲೇ ಸಂಪುಟ ವಿಸ್ತರಣೆ ನಡೆಸುತ್ತೇನೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್  ಸಿಂಗ್ ಅವರು ವಿದೇಶಕ್ಕೆ ತೆರಳಿದ್ದಾರೆ. ಅವರು ಸ್ವದೇಶಕ್ಕೆ ವಾಪಸಾದ ನಂತರ ದೆಹಲಿಗೆ ತೆರಳಿ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು. ಕಾಂಗ್ರೆಸ್‍ನ ಉನ್ನತ ಮೂಲಗಳ ಪ್ರಕಾರ ದಿಗ್ವಿಜಯ್  ಸಿಂಗ್ ಅವರು ಇದೇ ತಿಂಗಳು 22ಕ್ಕೆ ವಾಪಸ್ ಆಗಲಿದ್ದಾರೆ. ಹೀಗಾಗಿ 23ರ ನಂತರ ಭೇಟಿಗೆ ಸಮಯ ನಿಗದಿಯಾಗುವ ಸಾಧ್ಯತೆ ಇದೆ. ಈ ಬಾರಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಜತೆಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟ ವಿಸ್ತರಣೆಗೆ ಮುನ್ನ ಉಭಯ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜತೆ ಮಾತುಕತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ