ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ಕೋಮು ಶಕ್ತಿಗಳ ಕೈವಾಡ: ಸಿಎಂ

ಹಿರಿಯ ಸಾಹಿತಿ ಡಾ.ಎಂ.ಎಂ. ಕಲಬುರ್ಗಿ ಹತ್ಯೆಯಲ್ಲಿ ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು ಆ ದಿಕ್ಕಿನಲ್ಲೇ ತನಿಖೆ ಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ...

ನವದೆಹಲಿ: ಹಿರಿಯ ಸಾಹಿತಿ ಡಾ.ಎಂ.ಎಂ. ಕಲಬುರ್ಗಿ ಹತ್ಯೆಯಲ್ಲಿ ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು ಆ ದಿಕ್ಕಿನಲ್ಲೇ ತನಿಖೆ ಸಾಗಿದೆ ಎಂದು ಸಿಎಂ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ವಿರುದ್ಧ ಸಾಕ್ಷ್ಯಾಧಾರ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಹಂತದಲ್ಲಿದೆ. ಪೂರ್ಣ ಸಾಕ್ಷ್ಯಾಧಾರಗಳು ಸಿಕ್ಕ ನಂತರ ಕ್ರಮ ಕೈಗೊಳ್ಳಲಾಗುತ್ತದೆ  ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿ, ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆಯೋ ಅಲ್ಲೆಲ್ಲ ಕೋಮುವಾದಿ ಶಕ್ತಿಗಳು ಪ್ರಬಲವಾಗಿವೆ, ಅಂತಹ ಕೋಮುವಾದಿ ಶಕ್ತಿಗಳು ಬಾಲ ಬಿಚ್ಚದಂತೆ ನಾವು ನೋಡಿಕೊಳ್ಳುತ್ತೇವೆ ಎಂದರು.

ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಾಹಿತಿಗಳಿಬ್ಬರಿಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಠಾಣೆಗೆ ಕರೆದು ಐಪಿಸಿ 506ರಡಿ ಪ್ರಕರಣ ದಾಖಲಿಸಿ ತಕ್ಷಣ ಬಿಡುಗಡೆ ಮಾಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಆ ಬಗ್ಗೆ ನನಗೂ ವೈಯಕ್ತಿಕವಾಗಿ ಬೇಸರ ಇದೆ. ಬಹಿರಂಗವಾಗಿ ಸಾಹಿತಿಗಳಿಗೆ ಬೆದರಿಕೆ ಹಾಕುವುದನ್ನು ಸಂಘಟಿತ ಅಪರಾಧ ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸೂಕ್ತ ಪ್ರಕರಣಗಳನ್ನು ದಾಖಲಿಸಬೇಕು ಎಂದು ಗೃಹ ಇಲಾಖೆ ಮತ್ತು ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT