ರಾಹುಲ್ ಗಾಂಧಿ ಬಗ್ಗೆ ಮಾತಾಡುವ ಮುನ್ನ ಬಿಜೆಪಿ ಪ್ರಧಾನಿ ಬಗ್ಗೆ ಪ್ರಶ್ನಿಸಲಿ: ಕಾಂಗ್ರೆಸ್
ಬಿಹಾರ ಚುನಾವಣಾ ವೇಳೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿರುವುದಕ್ಕೆ ಟೀಕೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ನವದೆಹಲಿ: ಬಿಹಾರ ಚುನಾವಣಾ ವೇಳೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿರುವುದಕ್ಕೆ ಟೀಕೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ರಾಹುಲ್ ಗಾಂಧಿ ಎಲ್ಲಿಗೆ ವಿದೇಶ ಪ್ರವಾಸ ತೆರಳಿದ್ದಾರೆ ಎಂಬುದಕ್ಕೆ ನಿಖರ ಉತ್ತರ ನೀಡದ ಕಾಂಗ್ರೆಸ್ ಪಕ್ಷ, ನರೇಂದ್ರ ಮೋದಿ ವಿದೇಶ ಪ್ರವಾಸದ ಬಗ್ಗೆ ಪ್ರಶ್ನಿಸಿದ್ದು, ಮೋದಿ ವಿದೇಶ ಪ್ರವಾಸದ ಉದ್ದೇಶಗಳೇನು ಎಂದು ಪ್ರಶ್ನಿಸಿದೆ. ರಾಹುಲ್ ಗಾಂಧಿ ಗೀಳನ್ನು ಬಿಜೆಪಿ ಬಿಡಬೇಕು. ರಾಹುಲ್ ಗಾಂಧಿ ಎಲ್ಲಾದರೂ ಇರುತ್ತಾರೆ, ಬಿಜೆಪಿ ನಾಯಕರು ಅವರ ಕೆಲಸ ನೋಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಬಿಜೆಪಿ ನಾಯಕರು ಪ್ರಧಾನಿ ಮೋದಿ ಎಲ್ಲಿದ್ದಾರೆ ಹಾಗೂ ಅವರ ಯೋಜನೆಗಳೇನು ಎಂಬುದನ್ನು ಪ್ರಶ್ನಿಸಲಿ, ವಯಕ್ತಿಕ ವಿಷಯಗಳ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಕಾಂಗ್ರೆಸ್ ನಾಯಕ ಆಜಾದ್ ಸಲಹೆ ನೀಡಿದ್ದಾರೆ. ವಯಕ್ತಿಕ ಆಹ್ವಾನದ ಮೇರೆಗೆ ಕೊಲೊರಾಡೊದ ಆಸ್ಪೆನ್ ನಲ್ಲಿ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲೇ ಬಿಹಾರ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.