ರಾಜಕೀಯ

ಕೇಂದ್ರದ ವಿರುದ್ಧ ಕೇಜ್ರಿವಾಲ್ ಕರೆದಿದ್ದ ಮುಖ್ಯಮಂತ್ರಿಗಳೊಂದಿಗಿನ ಸಭೆ ವಿಫಲ

Srinivas Rao BV

ನವದೆಹಲಿ:ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಯತ್ನ ವಿಫಲವಾಗಿದೆ.
ಎನ್.ಡಿ.ಎ ಸರ್ಕಾರದ ವಿರುದ್ಧ ಒತ್ತಡ ಹೇರಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದರು. ಉತ್ತರ ಪ್ರದೇಶ ಹಾಗೂ ಬಿಹಾರದ ಮುಖ್ಯಮಂತ್ರಿಗಳು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ-ಕೇಂದ್ರ ಸರ್ಕಾರದ ನಡುವಿನ ಸಂಬಂಧಗಳ ಬಗ್ಗೆ ಚರ್ಚೆ ನಡೆಸಲು ಸೆ.30 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಲು ಅರವಿಂದ್ ಕೇಜ್ರಿವಾಲ್ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದರು.
ಬಿಜೆಪಿ  ಹಾಗೂ ಕಾಂಗ್ರೆಸ್ ಮುಖ್ಯಮಂತ್ರಿಗಳು ಈ ಸಭೆಗೆ ಬರಲು ಸಾಧ್ಯವಿಲ್ಲ ಎಂದು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿ- ಕಾಂಗ್ರೆಸ್ಸೇತರ ಮುಖ್ಯಂಆತ್ರಿಗಳನ್ನು ಒಗ್ಗೂಡಿಸಲು ಕೆಜ್ರಿವಾಲ್ ಯತ್ನಿಸಿದರಾದರೂ ಅದು ಯಶಸ್ವಿಯಾಗಿಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಭೆಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದರೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಚುನಾವಣಾ ಪ್ರಚಾರದ ಕಾರಣ ನೀಡಿದ್ದಾರೆ. ಅಲ್ಲದೇ ಅಗತ್ಯವಿದ್ದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಕ್ಕೆ ಸಿಗುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ. ಸಭೆಯಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತ್ರಿಪುರಾದ ಮುಖ್ಯಮಂತ್ರಿ ಮಣಿಕ್ ಸರ್ಕಾರ್ ದೆಹಲಿಯಲ್ಲಿದ್ದಾರೆ.

SCROLL FOR NEXT