ಬೆಂಗಳೂರು: ರಾಜ್ಯಾಪಾಲ ವಜುಭಾಯಿ ವಾಲಾ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕೇವಲ ಬಿಜೆಪಿ ನಾಯಕರ ಮಾತನ್ನು ಕೇಳುತ್ತಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು, ಸರ್ಕಾರದ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ವಿಎಸ್ ಉಗ್ರಪ್ಪ ಆಪಾದಿಸಿದ್ದಾರೆ.
ರಾಜಭವನ ಬಿಜೆಪಿ ಕಛೇರಿಯಾಗಿದೆ. ಬಿಜೆಪಿ ನಾಯಕರಿಗೆ ರಾಜಭವನ ಬಾಗಿಲು ಯಾವಾಗಲೂ ತೆರೆದಿರುತ್ತದೆ. ರಾಜಭವನ ದುರ್ಬಳಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ವಕ್ಫ್ ಆಸ್ತಿ ಕುರಿತ ಅನ್ವರ್ ಮಾಣಿಪ್ಪಾಡಿ ವರದಿ ಸಂಬಂಧ ಸಿದ್ದರಾಮಯ್ಯ ಅವರು ನೀಡಿರುವ ವಿವರಣೆಯಿಂದ ತೃಪ್ತಿ ಹೊಂದದ ರಾಜ್ಯಪಾಲರು, ಅಧಿಕಾರ ಮೀರಿ ಸರ್ಕಾರಕ್ಕೆ ಸೂಚನೆ ನೀಡಲು ಹೊರಟಿದ್ದಾರೆ. ಬಿಜೆಪಿ ತಾಳಕ್ಕೆ ತಕ್ಕಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂದ ಅವರು, ಸರ್ಕಾರದ ಎಲ್ಲಾ ನಿರ್ಧಾರಗಳಿಗೂ ರಾಜ್ಯಪಾಲರಿಂದ ಆಕ್ಷೇಪವಿರುತ್ತದೆ ಎಂದು ಕಿಡಿ ಕಾರಿದ್ದಾರೆ.