ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ಪಕ್ಷದ ಬೆಂಗಳೂರಿನ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಬೆಂಗಳೂರಿನಲ್ಲಿ ನಾಳೆ ಸಂಜೆ 6ಗಂಟೆಗೆ ನಡೆಯುವ ಸಭೆಯಲ್ಲಿ ಬೆಂಗಳೂರಿನ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಬಿಬಿಎಂಪಿ ಕಾರ್ಪೊರೇಟರಗಳು ಸಹ ಭಾಗವಹಿಸುತ್ತಿದ್ದು, ಪಕ್ಷ ಸಂಘಟನೆ ಕುರಿತು ಹಾಗೂ 14ರಂದು ನಡೆಯುವ ಬಿಜೆಪಿ ಸಮಾವೇಶದ ಬಗ್ಗೆ ಬಿಎಸ್ ವೈ ಚರ್ಚೆ ನಡೆಸಲಿದ್ದಾರೆ.
ಇನ್ನೂ ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ವಿರುದ್ಧದ ಎಲ್ಲಾ ಆರೋಪಗಳಿಂದ ಮುಕ್ತವಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.