ಡಿಕೆ ಶಿವಕುಮಾರ್ 
ರಾಜಕೀಯ

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಮತ್ತೆ ಚರ್ಚೆಗೆ: ಡಿಕೆಶಿಗೆ ಮೊದಲ ಆದ್ಯತೆ

2018 ವಿಧಾನಸಭಾ ಚುನಾವಣೆ ಎದುರಿಸುವ ಸಲುವಾಗಿ ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರನ್ನು...

ಬೆಂಗಳೂರು: 2018 ವಿಧಾನಸಭಾ ಚುನಾವಣೆ ಎದುರಿಸುವ ಸಲುವಾಗಿ ಬಿಜೆಪಿ ರಾಜ್ಯಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರನ್ನು ನೇಮಕ ಮಾಡಿದ  ಹಿನ್ನಲೆಯಲ್ಲಿ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ನೇಮಕ ಬಗ್ಗೆ ಚರ್ಚೆ ಆರಂಭಿಸಿದೆ. 
ಈ ಬಾರಿ ಜಾತಿ ಸಮೀಕರಣದ ಜತೆಗೆ ಪಕ್ಷ ಸಂಘಟನೆಗೆ ಸೂಕ್ತರಾದವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲು ಕಾಂಗ್ರೆಸ್ ವರಿಷ್ಠರು ಲೆಕ್ಕಾಚಾರ ಆರಂಭಿಸಿದ್ದಾರೆ. 
ಆಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳಲು ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಂದು ಕೆಪಿಸಿಸಿ ಅಧ್ಯಕ್ಷ ನೇಮಕದ ಬಗ್ಗೆ ರಾಜ್ಯದ ನಾಯಕರು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇನ್ನೂ 2 ವರ್ಷದ ಆಡಳಿತಾವಧಿ ಬಾಕಿ ಇದೆ. ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದವರಿಗೆ ಮುಂದಿನ ಚುನಾವಣೆ ಬಳಿಕ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬಂದರೆ ಉನ್ನತ ಸ್ಥಾನ ಅಲಂಕರಿಸುವ ಅವಕಾಶ ಸಿಗಬಹುದು. ಈ ಹಿನ್ನಲೆಯಲ್ಲಿ ಮುಂದಿನ ಕೆಪಿಸಿಸಿ ಅಧ್ಯಕ್ಷ ನೇಮಕದ ಬಗ್ಗೆ ಬಾರಿ ಚರ್ಚೆ ಆರಂಭವಾಗಿದೆ. 
ಲಿಂಗಾಯುತ ಜನಾಂಗದ ನಾಯಕ ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಲ್ಲೂ ಗೌಡ ಮತ್ತು ಲಿಂಗಾಯುತ ಜನಾಂಗದ ಬೆಂಬಲವಿರುವ ನಾಯಕನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. 
ಅಧ್ಯಕ್ಷ ಸ್ಥಾನ ಆಯ್ಕೆ ವಿಚಾರದಲ್ಲಿ ಒಕ್ಕಲಿಗ ಜನಾಂಗದ ಡಿಕೆ ಶಿವಕುಮಾರ್ ಅವರ ಹೆಸರು ಮೊದಲನೆಯದಾಗಿದೆ. ಪಕ್ಷದ ಕಾರ್ಯ ನಿರ್ವಹಣಕಾರ ಮತ್ತು ಉತ್ತಮ ಸಂಘಟಕ ಹಾಗೂ ಮೈಸೂರು ವ್ಯಾಪ್ತಿಯಲ್ಲಿ ಪ್ರಭಾವಿ ವ್ಯಕ್ತಿ. ಅಷ್ಟೇ ಅಲ್ಲದೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹತ್ತಿರದವರಾಗಿರುವ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಾಗಿದೆ. 
ಈ ಸಂಬಂಧ ಪ್ರತಿಕ್ರಯಿಸಿರುವ ಡಿಕೆ ಶಿವಕುಮಾರ್, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ವರಿಷ್ಠರು ನನಗೆ ಯಾವ ಜವಾಬ್ದಾರಿ ನೀಡುತ್ತಾರೋ ಅದನ್ನು ನಾನು ನಿಭಾಯಿಸುತ್ತೇನೆ. ಅಧ್ಯಕ್ಷ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಸದ್ಯಕ್ಕೆ ನನಗೆ ಸಚಿವನ ಜವಾಬ್ದಾರಿ ನೀಡಿದ್ದು, ಅದನ್ನು ನಾನು ನಿಭಾಯಿಸುತ್ತೇನೆ ಎಂಡು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!