ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ 
ರಾಜಕೀಯ

ಸಿಗರನಹಳ್ಳಿ ದೇವಾಲಯ ವಿವಾದ: ಸಚಿವ ಎ ಮಂಜು ವಿರುದ್ಧ ಕಿಡಿಕಾರಿದ ದೇವೇಗೌಡ

ಹೊಳೆನರಸಿಪುರ ತಾಲ್ಲೂಕಿನ ಸಿಗರನಹಳ್ಳಿಯ ದೇವಸ್ಥಾನಕ್ಕೆ ದಲಿತರ ಪ್ರವೇಶ ಕುರಿತಂತೆ ನಡೆದಿರುವ ಘಟನೆಗೆ ಜಿಲ್ಲಾ ಉಸ್ತುವಾರಿ...

ಬೆಂಗಳೂರು: ಹೊಳೆನರಸಿಪುರ ತಾಲ್ಲೂಕಿನ ಸಿಗರನಹಳ್ಳಿಯ ದೇವಸ್ಥಾನಕ್ಕೆ ದಲಿತರ ಪ್ರವೇಶ ಕುರಿತಂತೆ ನಡೆದಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ನೇರ ಹೊಣೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆರೋಪಿಸಿದ್ದಾರೆ. 
ಉಸ್ತುವಾರಿ ಸಚಿವರು ಹೇಳಿದ್ದೇ ಕಾನೂನು ಎಂಬಂತಾಗಿದೆ. ಅಮಾಯಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಅರಾಜಕತೆ ಸೃಷ್ಠಿಸಲು ಹೊರಟಿರುವ ಎ ಮಂಜು ಅವರು, ಹಣ ಮಾಡುವ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಆಪಾದಿಸಿದ್ದಾರೆ.
ಸರ್ಕಾರ ಘಟನೆ ಸಂಬಂಧ ಹೈಕೋರ್ಟ್ ನ್ಯಾಯಾಮೂರ್ತಿಗಳಿಂದ ತನಿಖೆಗೆ ಆದೇಶಿಸಬೇಕು ಎಂದ ಅವರು, ಈ ಪ್ರಕರಣ ಬಗೆಹರಿಯುವವರಿಗೆ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. 
ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನ ಪ್ರವೇಶ ಸಂಬಂಧ ಸವರ್ಣೀಯರು ಮತ್ತು ದಲಿತರ ಮಧ್ಯೆ ಸಂಘರ್ಷ ನಡೆದಿತ್ತು. ಪ್ರಕರಣ ಸಂಬಂಧ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!