ಎಸ್ .ಎಂ ಕೃಷ್ಣ ಮತ್ತು ಸಿದ್ದರಾಮಯ್ಯ 
ರಾಜಕೀಯ

ರಾಜ್ಯ ರಾಜಕೀಯಕ್ಕೆ ಎಸ್.ಎಂ. ಕೃಷ್ಣ ಎಂಟ್ರಿ!; ಸಿದ್ದು ನೆತ್ತಿ ಮೇಲೆ ತೂಗುಗತ್ತಿ

ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಆಸಕ್ತಿ ...

ಬೆಂಗಳೂರು: ಕೇಂದ್ರದ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಸಿಎಂ ಎಸ್. ಎಂ ಕೃಷ್ಣ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ.

ಮನಮೋಹನ್ ಸಿಂಗ್ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿದ್ದ ಎಸ್ ಎಂ ಕೃಷ್ಣ ಅವರನ್ನು ರಾಜ್ಯದ ರಾಜಕಾರಣಕ್ಕೆ ತಂದು, ನಾಯಕತ್ವ ಬದಲಿಸಲು ಹಲವು ಕಾಣದ ಕೈ ಗಳು ಕೆಲಸ ಮಾಡುತ್ತಿದ್ದು, ಕೃಷ್ಣ ಕೂಡ ಉತ್ಸುಕರಾಗಿದ್ದಾರೆ.

ರಾಜ್ಯದಲ್ಲಿ ತಾಂಡವವಾಡುತ್ತಿರುವ ಭೀಕರ ಬರಗಾಲ ಸಂಬಂಧ ಎಲ್ಲಾ ಜಿಲ್ಲೆಗಳಲ್ಲೂ ಸೂಕ್ತವಾದ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಸ್. ಎಂ. ಕೃಷ್ಣ  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅವರಿಗೆ ಪತ್ರ ಬರೆದಿದ್ದರು.
ಜೊತೆಗೆ ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಸರಿಯಾದ ರೀತಿಯ ಬರ ಪರಿಹಾರ ಕಾರ್ಯ ಕೈಗೊಳ್ಳುತ್ತಿಲ್ಲ ಎಂದು ಪತ್ರದಲ್ಲಿ ಕೃಷ್ಣ ಅಸಮಧಾನ ವ್ಯಕ್ತ ಪಡಿಸಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ ಎಸ್. ಎಂ ಕೃಷ್ಣ ಸಿದ್ದರಾಮಯ್ಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಮಂಡ್ಯದಲ್ಲಿ ನಡೆದ  ಒಕ್ಕಲಿಗರ ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಅವರ ಪುತ್ರ ಕುಮಾರ ಸ್ವಾಮಿ ಅವರಜೊತೆ ಎಸ್. ಎಂ ಕೃಷ್ಣ ವೇದಿಕೆ ಹಂಚಿಕೊಂಡು ಪರಸ್ಪರರು ಹಾಡಿಹೊಗಳಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಇನ್ನು ತಮ್ಮ ಅಧಿಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಿಎಂ ಸಿದ್ದರಾಮಯ್ಯಗೆ ಸಂಪುಟ ವಿಸ್ತರಣೆ ಮಾಡಲು ಸೋನಿಯಾ ಗಾಂಧಿ ಗ್ರೀನ್ ಸಿಗ್ನಲ್ ನೀಡದಿರುವುದು ಸಿದ್ದುಗೆ ಹಿನ್ನಡೆಯಾದಂತಾಗಿದೆ.

ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಹಲವು ಆರೋಪಗಳು ಕೂಡ ನಾಯಕತ್ವ ಬದಲಾವಣೆಗೆ ಮತ್ತಷ್ಟು ಪೋಷಣೆ ನೀಡಿದಂತಾಗಿದೆ.

ಮಗನಿಗೆ ಅನುಕೂಲ ಮಾಡಿಕೊಡಲು ಪುತ್ರನ ಸ್ನೇಹಿತನಿಗೆ ಬಿಡಿಎ ಜಾಗ ನೀಡಿರುವುದು, ದುಬಾರಿ ವಾಚ್ ಪ್ರಕರಣ, ಎಸಿಬಿ ಸ್ಥಾಪನೆ ಈ ಎಲ್ಲಾ ಪ್ರಕರಣಗಳಿಂದ ಸಿದ್ದರಾಮಯ್ಯ ಅವರ  ಕುರ್ಚಿ ಹೋಗುವ ಭಯವಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ನೆತ್ತಿಯ ಮೇಲೆ ಬದಲಾವಣೆ ಎಂಬ ತೂಗು ಗತ್ತಿ ನೇತಾಡುತ್ತಿದೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದಂತೆ ಇರುವ ಸಿಎಂ ಸಿದ್ದರಾಮಯ್ಯ ಬರ ಪೀಡಿತ ಜಿಲ್ಲೆಗಳ ಪ್ರವಾಸ ಕೈಗೊಂಡು ಬ್ಯುಸಿಯಾಗಿದ್ದಾರೆ.

ಹಲವು ದಿನಗಳಿಂದ ಕೇಳಿ ಬರುತ್ತಿರುವ ದಲಿತ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳು ಸಹ ಸಿದ್ದರಾಮಯ್ಯ ವಿರುದ್ದ ಪಿತೂರಿ ನಡೆಸಿದ್ದಾರೆ. ದಲಿತ ಸಿಎಂ ಆಕಾಂಕ್ಷಾಯಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT