ಮೈಸೂರು: ದೇಶ ವಿರೋಧಿ ಚಟುವಟಿಕೆಗೆಗಳಿಗೆ ಬೆಂಬಲ ನೀಡುವಂತ ಹುಚ್ಚು ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಮೈಸೂರಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ಮತ್ತು ಜಿ.ಪರಮೇಶ್ವರ್ ಅವರು ಸೈನಿಕರ ವಿರುದ್ಧ ಮಾತನಾಡುವುದು, ಘೋಷಣೆ ಕೂಗುವುದು ಕ್ಷಮಿಸಲಾಗದು ಎಂದು ಹೇಳಿದ್ದಾರೆ.
ಪರಮೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಗೃಹ ಸಚಿವರಲ್ಲ, ಅರು ರಾಜ್ಯಕ್ಕೆ ಗೃಹ ಸಚಿವರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸುಮಾರು 20 ದೇಶಗಳು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯನ್ನು ನಿಷೇಧಿಸಿವೆ. ಇದು ಪರಮೇಶ್ವರ್ ಅವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ ಅವರು ರಾಜ್ಯದಲ್ಲೂ ಅಮ್ನೆಸ್ಟಿ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಹಾಗೂ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿದ ಅವರು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.