ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಪಾಕ್ ಪರ ರಮ್ಯಾ ಹೇಳಿಕೆ: ಕಾಂಗ್ರೆಸ್ಸಿಗರಿಗೆ ಪಾಕ್ ಹೊಗಳುವ ಹವ್ಯಾಸವಿದೆ- ಬಿಜೆಪಿ

ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿರುವುದು ಆಶ್ಟರ್ಯವೇನು ಉಂಟು ಮಾಡಿಲ್ಲ. ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನವನ್ನು ಹೊಗಳುವ ಹವ್ಯಾಸ ಈ ಮೊದಲಿನಿಂದಲೂ...

ಮಾಜಿ ಶಾಸಕಿ ರಮ್ಯಾ ಮತ್ತು ಬಿಜೆಪಿ ನಾಯಕ ಎಸ್. ಪ್ರಕಾಶ್
Manjula VN
Updated On : 23 Aug 2016, 4:06 am

ಬೆಂಗಳೂರು: ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿರುವುದು ಆಶ್ಟರ್ಯವೇನು ಉಂಟು ಮಾಡಿಲ್ಲ. ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನವನ್ನು ಹೊಗಳುವ ಹವ್ಯಾಸ ಈ ಮೊದಲಿನಿಂದಲೂ ಇದೆ ಎಂದು ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು ಹೇಳಿದ್ದಾರೆ.

ಮಾಜಿ ಸಂಸದೆ ರಮ್ಯಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ಹೊಗಳುತ್ತಿರುವುದು ದೇಶಕ್ಕೆ ಹೊಸದೇನಲ್ಲ. ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನವನ್ನು ಹೊಗಳುವ ಹವ್ಯಾಸ ಈ ಮೊದಲಿನಿಂದಲೂ ಇದೆ ಎಂದು ಹೇಳಿದ್ದಾರೆ.

ಮಾಜಿ ಸಂಸದೆ ನೀಡಿರುವ ಹೇಳಿಕೆಯನ್ನು ನಿರ್ಲಕ್ಷಿಸಬೇಕಿದೆ. ರಮ್ಯಾ ಅವರು ಯಾವ ಆಯಾಮದಲ್ಲಿ ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆಂಬುದನ್ನು ತಿಳಿಯಬೇಕಿದೆ. ಸುಖಾಸುಮ್ಮನೆ ನಾವು ಮಾಜಿ ಸಂಸದೆಗೆ ಪ್ರಚಾರವನ್ನು ನೀಡುತ್ತಿದ್ದೇವೆಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿದ್ದ ರಮ್ಯಾ ಅವರು, ಪಾಕ್ ಕುರಿತು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಸರಿಯಲ್ಲ. ಪಾಕಿಸ್ತಾನ ನರಕವಲ್ಲ, ಪಾಕಿಸ್ತಾನದವರು ಒಳ್ಳೆಯವರೆಂದು ಹೇಳಿದ್ದರು. ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿದ್ದು, ರಮ್ಯಾ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments