ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಡಾ.ಯತೀಂದ್ರ ಸಭೆ, ಸಿಎಂ 2ನೇ ಪುತ್ರ ರಾಜಕೀಯಕ್ಕೆ?

Lingaraj Badiger
ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡನೆಯ ಪುತ್ರ ಡಾ.ಯತೀಂದ್ರ ಅವರು ಶೀಘ್ರದಲ್ಲೇ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. 
ಸಿಎಂ ಮೊದಲನೆ ಪುತ್ರ ರಾಕೇಶ್ ಅವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಎರಡನೇ ಪುತ್ರ ಡಾ.ಯತೀಂದ್ರ ಅವರು ರಾಜಕೀಯಕ್ಕೆ ಬರುವಂತೆ ಒತ್ತಾಯಿಸುತ್ತಿದ್ದು, ಈ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಯತೀಂದ್ರ ಅವರು ಇಂದು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿರುವ ಬಗ್ಗೆ ಮತ್ತು ತಾವು ರಾಜಕೀಯಕ್ಕೆ ಬರುವ ಬಗ್ಗೆ ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಡಾ.ಯತೀಂದ್ರ ಅವರು ನಿರಾಕರಿಸಿದ್ದಾರೆ.
ವೈದ್ಯಕೀಯ ವೃತ್ತಿಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿದ್ದ ಯತೀಂದ್ರ ಅವರು ರಾಕೇಶ್ ನಿಧನದಿಂದ ಅನಿವಾರ್ಯವಾಗಿ ರಾಜಕೀಯ ಪ್ರವೇಶಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಕುಟುಂಬದವರ ಒತ್ತಾಸೆ ಮೇರೆಗೆ ಡಾ. ಯತೀಂದ್ರ ಅವರು ರಾಜಕೀಯ ಪ್ರವೇಶಿಸಲು ಸಮ್ಮತಿಸಿದ್ದಾರೆಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಹಿರಿಯ ಸಹೋದರ ರಾಕೇಶ್ ಅವರು ಸಾರ್ವಜನಿಕರ ಸೇವೆಯಲ್ಲಿ ನಿರ್ವಹಿಸುತ್ತಿದ್ದ ಜವಾಬ್ದಾರಿಯನ್ನು ನಿರ್ವಹಿಸಲು ಯತೀಂದ್ರ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
SCROLL FOR NEXT