ಮೈಸೂರು: 2108ರ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಮೈಸೂರಿನ ಹೂಟಗಳ್ಳಿ ಸಂತೆ ಮೈದಾನದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಉಳಿಸಲು ಜನರ ಮುಂದೆ ಮತದ ಭಿಕ್ಷೆ ಬೇಡುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಕುಮಾರಸ್ವಾಮಿ ತಾನು ಮುಖ್ಯಮಂತ್ರಿಯಾದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಗಿ ಆಡಿದ ಮಾತಿನಿಂದ ನನ್ನ ಮನಸ್ಸಿಗೆ ನೋವಾಗಿದೆ. ಅಧಿಕಾರದ ದರ್ಪದಿಂದ ಸಿಎಂ ಈ ಮಾತುಗಳನ್ನು ಆಡಿದ್ದಾರೆ. ಪಕ್ಷ ಉಳಿಸೋದು ನನ್ನ ಗುರಿ, ಅಧಿಕಾರಕ್ಕೆ ಬಾರದೇ ಇಂತಹ ಕಾರ್ಯಕ್ರಮಗಳನ್ನು ಕೊಡುತ್ತೇನೆ ಎಂದು ಹೇಳುವುದು ಸರಿಯಲ್ಲ. ಅದು ಸಂಶಯಕ್ಕೆ ದಾರಿಯಾಗುತ್ತದೆ' ಎಂದು ಹೇಳಿದರು.
ಇನ್ನೂ ಜೆಡಿಎಸ್ ನಿಂದ ಅಮಾನತುಗೊಂಡ ಭಿನ್ನಮತೀಯ ಶಾಸಕರು ಮರಳಿ ಜೆಡಿಎಸ್ ಬರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಶಿಸ್ತು ಸಮಿತಿ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮಗಳ ಬಗ್ಗೆ ಚಿಂತಿಸುವುದಾಗಿ ತಿಳಿಸಿದ್ದಾರೆ.