ಎಚ್ ಡಿ ದೇವೇಗೌಡ 
ರಾಜಕೀಯ

ಜಮೀರ್ ಅಹ್ಮದ್ ಜೆಡಿಎಸ್ ನಲ್ಲಿದ್ದಾರೋ, ಕಾಂಗ್ರೆಸ್ ನಲ್ಲಿದ್ದಾರೋ?: ದೇವೇಗೌಡ

ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ...

ಬೆಂಗಳೂರು: ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಜಮೀರ್ ಅಹ್ಮದ್ ಜೆಡಿಎಸ್ ನಲ್ಲಿದ್ದಾರೋ ಅಥವಾ ಕಾಂಗ್ರೆಸ್ ನಲ್ಲಿದ್ದಾರೋ ಎಂದು ಪ್ರಶ್ನಿಸಿದ್ದಾರೆ.
ಹೆಬ್ಬಾಳ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಜಮೀರ್ ಅಹ್ಮದ್ ನನ್ನ ವಿರುದ್ಧ ಉರ್ದು ಭಾಷೆಯಲ್ಲಿ ಜಾಹೀರಾತುಗಳನ್ನು ಹಾಕಿಸಿದ್ದಾರೆ. ಪಕ್ಷಕ್ಕಾಗಿ ದೇವೇಗೌಡರು ಏನ್ ಬೇಕಾದರೂ ಮಾಡುತ್ತಾರೆ ಎಂದು ಹೇಳುತ್ತಾರೆ. ಅವರು ಯಾವ ಪಕ್ಷದಲ್ಲಿದ್ದಾರೆ ಅಂತ ಗೊತ್ತಾ ಎಂದು ಪ್ರಶ್ನಿಸಿದರು.
ಹೆಬ್ಬಾಳ ವಿಧಾನಸಭಾ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ನಡೆಸುತ್ತಿರುವ ರಾಜಕಾರಣದ ಬಗ್ಗೆ ಮಾಹಿತಿಗಳು ಬಂದಿವೆ. ನನ್ನ ವಿರುದ್ಧ ಅವರು ಮಾತನಾಡುತ್ತಿರುವುದು ಗೊತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಶಕ್ತಿಯನ್ನು ತೋರಿಸುತ್ತೇವೆ ಎಂದು ಮಾಜಿ ಪ್ರಧಾನಿ ಸವಾಲು ಹಾಕಿದರು.
ಇದೇ ವೇಳೆ ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಜಮೀರ್ ಅವರ ತಮ್ಮನಿಗಾಗಿ ನನ್ನ ಬಳಿ ಟಿಕೆಟ್ ಕೇಳಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ