ಶಕೀಲ್ ನವಾಜ್ - ದೇವೇಗೌಡ 
ರಾಜಕೀಯ

ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಕೀಲ್ ನವಾಜ್ ರಾಜಿನಾಮೆ

ಜೆಡಿಎಸ್ ನಲ್ಲಿ ಮತ್ತೆ ನಾಯಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್...

ಬೆಂಗಳೂರು: ಜೆಡಿಎಸ್ ನಲ್ಲಿ ಮತ್ತೆ ನಾಯಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ ಬುಧವಾರ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ ಎಂ ಶಕೀಲ್ ನವಾಜ್ ಅವರು ರಾಜಿನಾಮೆ ನೀಡಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ದೇವೇಗೌಡ ಅವರು, ಜಮೀರ್ ಅಹ್ಮದ್ ನನ್ನ ವಿರುದ್ಧ ಉರ್ದು ಭಾಷೆಯಲ್ಲಿ ಜಾಹೀರಾತುಗಳನ್ನು ಹಾಕಿಸಿದ್ದಾರೆ. ಪಕ್ಷಕ್ಕಾಗಿ ದೇವೇಗೌಡರು ಏನ್ ಬೇಕಾದರೂ ಮಾಡುತ್ತಾರೆ ಎಂದು ಹೇಳುತ್ತಾರೆ. ಅವರು ಯಾವ ಪಕ್ಷದಲ್ಲಿದ್ದಾರೆ ಅಂತ ಗೊತ್ತಾ ಎಂದು ಪ್ರಶ್ನಿಸಿದ್ದರು.
ಜಮೀರ್ ಅಹ್ಮದ್ ಖಾನ್ ವಿರುದ್ಧದ ವಾಗ್ದಾಳಿಯಿಂದ ತೀವ್ರ ಬೇಸರಗೊಂಡಿರುವ ಶಕೀಲ್ ನವಾಜ್ ಅವರು, ಇಂದು ಅಲ್ಪಸಂಖ್ಯಾತ ಘಟಕದ ರಾಜ್ಯಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ, ದೇವೇಗೌಡರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!