ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್ ಮುಸ್ಲಿಮರಿಗೆ ಟಿಕೆಟ್ ನೀಡಿದ್ದು ಕಾಂಗ್ರೆಸ್ ಸೋಲಿಸುವ ಉದ್ದೇಶದಿಂದ: ಸಿದ್ದರಾಮಯ್ಯ

ಹೆಬ್ಟಾಳ ಮತ್ತು ಬೀದರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ಪರವಾಗಿಲ್ಲ. ಆದರೆ, ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್‌ ಅಲ್ಪಸಂಖ್ಯಾತ...

ಬೀದರ್: ಹೆಬ್ಟಾಳ ಮತ್ತು ಬೀದರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ಪರವಾಗಿಲ್ಲ. ಆದರೆ, ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ಹೆಬ್ಟಾಳ ಮತ್ತು ಬೀದರ್ ಎರಡೂ ಕ್ಷೇತ್ರಗಳಲ್ಲಿ ಈ ಹಿಂದೆ ಸೋಲನುಭವಿಸಿದ್ದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಜೆಡಿಎಸ್‌ಗೆ ಜಾತ್ಯತೀತ ತತ್ವದಲ್ಲಿ ನಂಬಿಕೆ ಇದ್ದಲ್ಲಿ ಕಾಂಗ್ರೆಸ್‌ ವಿರುದ್ಧ ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಬೇರೆ ಸಮಾಜದವರನ್ನು ಸ್ಪರ್ಧೆಗೆ ಇಳಿಸಬಹುದಿತ್ತು. ಆದರೆ, ಹೆಬ್ಟಾಳ ಮತ್ತು ಬೀದರ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ಪರವಾಗಿಲ್ಲ. ಆದರೆ, ಕಾಂಗ್ರೆಸ್‌ನ್ನು ಸೋಲಿಸಬೇಕು ಎಂಬ ಉದ್ದೇಶದಿಂದ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಕಿಡಿಕಾರಿದರು.

ಜೆಡಿಎಸ್‌ ಶಾಸಕರು ಜಾತ್ಯತೀತ ತತ್ವ ಪಾಲಿಸುವುದಾದರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ನೇರವಾಗಿ ಬೆಂಬಲ ಕೊಡಲಿ ಎಂದು ಸವಾಲು ಹಾಕಿದರು.ಉಪ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ಹರಿಹಾಯ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!