ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮುಂದಿನ 15 ದಿನಗಳಲ್ಲಿ ಸಿದ್ದರಾಮಯ್ಯ ಸಿಎಂ ಕುರ್ಚಿ ಕಳೆದುಕೊಳ್ಳಲಿದ್ದಾರೆ: ಎಚ್ ಡಿಕೆ

ಮುಂದಿನ ಹದಿನೈದು ದಿನಗಳಲ್ಲಿ ಸಿದ್ದರಾಮಯ್ಯ ಸಿ.ಎಂ ಹುದ್ದೆ ಕಳೆದುಕೊಳ್ಳಬಹುದೆಂದು ಹೆಚ್.ಡಿ.ಕೆ ಕಲಬುರಗಿಯಲ್ಲಿ ಬಾಂಬ್ ಸಿಡಿಸಿದ್ದಾರೆ...

ಕಲಬುರಗಿ: ಮುಂದಿನ ಹದಿನೈದು ದಿನಗಳಲ್ಲಿ ಸಿದ್ದರಾಮಯ್ಯ ಸಿ.ಎಂ ಹುದ್ದೆ ಕಳೆದುಕೊಳ್ಳಬಹುದೆಂದು ಹೆಚ್.ಡಿ.ಕೆ ಕಲಬುರಗಿಯಲ್ಲಿ ಬಾಂಬ್ ಸಿಡಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ  ಎಚ್.ಡಿ ಕುಮಾರಸ್ವಾಮಿ ಕೈ ಗಡಿಯಾರದಂತಹ ವೈಯಕ್ತಿಕ ವಿಷಯದ ಬಗ್ಗೆ ಮಾತನಾಡುವುದು ಎಷ್ಟು ಸೂಕ್ತ ಎಂಬ ಪ್ರಶ್ನೆಗೆ, ವಾಚ್‌ ಸುದ್ದಿ ಚಿಕ್ಕದಲ್ಲ, ಅದು 70 ಲಕ್ಷ ರೂಪಾಯಿ ಬೆಲೆ ಬಾಳುವ ಕೈ ಗಡಿಯಾರದ ಹಿಂದೆ ದೊಡ್ಡ ಗುಟ್ಟು ಅಡಗಿದೆ ಎಂದು ಹೇಳಿದರು.

ಸಮಾಜವಾದಿ- ಲೋಹಿಯಾ ಸಿದ್ಧಾಂತದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳಿಗೆ 70 ಲಕ್ಷ ರು.ವಾಚ್‌ ನೀಡಿದವರು ಯಾರು, ಯಾಕೆ ಕೊಟ್ಟರು ? ಅನ್ನೋ ಮಾಹಿತಿ ಕಲೆ ಹಾಕುತ್ತಿದ್ದು ಇಷ್ಟರಲ್ಲೇ ಎಲ್ಲವನ್ನು ಬಹಿರಂಗ ಪಡಿಸುತ್ತೇವೆ. ಆಗ ಸಿಎಂ ತಮ್ಮ ಕುರ್ಚಿ ಕಳೆದುಕೊಂಡರೂ ಆಶ್ಚರ್ಯವಿಲ್ಲ ಎಂದರು.

ಇನ್ನು ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಚಿವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಉಪ ಚುನಾವಣೆ ಗೆಲುವಿಗಾಗಿ ಇಡೀ ಸಚಿವ ಸಂಪುಟಕ್ಕೆ ಉಸ್ತುವಾರಿ ನೀಡಿದ್ದಾರೆ.  ಇಷ್ಟೊಂದು ಸಮಯದಲ್ಲಿ ಕೇವಲ ವಾರಕ್ಕೆ ಒಂದು ದಿನ ರೈತರ ಬಗ್ಗೆ, ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಚಿವರು ಸಮಯ ನೀಡಿದ್ರೆ ಸಮಸ್ಯೆ ಅನ್ನೋದೆ ಇರುತ್ತಿರಲಿಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!