ರಮ್ಯಾ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಶ್ರೀಲಂಕಾಗೆ ಯಾಕೆ ಹೋಗಿದ್ದರು? ನನಗೆ ಹಲವು ರಹಸ್ಯಗಳು ತಿಳಿದಿವೆ: ರಮ್ಯಾ

ಎಚ್ ಡಿಕೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಮ್ಯಾ, ನಾನು ಲಂಡನ್ ಗೆ ಮಜಾ ಮಾಡಲು ಹೋಗಿರಲಿಲ್ಲ. ಅಧ್ಯಯನಕ್ಕಾಗಿ ತೆರಳಿದ್ದೆ. ಕುಮಾರ ಸ್ವಾಮಿ ಶ್ರೀಲಂಕಾಗೆ ಏಕೆ ಹೋಗಿದ್ದರು...

ಮಂಡ್ಯ: ಮಾಜಿ ಸಂಸದೆ ರಮ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ .ಡಿ ಕುಮಾರಸ್ವಾಮಿ ಅವರ ಮಾತಿನ ಸಮರ ತಾರಕಕ್ಕೇರಿದ್ದು ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ.

ಪಂಚಾಯಿತಿ ಚುನಾವಣಾ ಪ್ರಚಾರ ವೇದಿಕೆಯನ್ನು ಇಬ್ಬರು ವಯಕ್ತಿಕವಾಗಿ ದೋಷಾರೋಪಣೆ ಮಾಡಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಎಚ್ಡಿಕೆ ರಮ್ಯಾಗೆ ರಾಜಕೀಯ ಗೊತ್ತಿಲ್ಲ. ಅವರು ಬಣ್ಣದ ಲೋಕದ ಹೆಣ್ಣು, ಪ್ರಾಮಾಣಿಕವಾಗಿ ನಡೆದುಕೊಂಡರೇ ಜನ ಗುರುತಿಸುತ್ತಾರೆ. ನಾಟಕಕ್ಕೆ ಬೆಲೆ ಕೊಡುವುದಿಲ್ಲ ಎಂದು ಹೇಳಿದ್ದ ಅವರು,  ರಮ್ಯಾ ಲಂಡನ್ ಗೆ ಹೋಗಿದ್ಯಾಕೆ ಎಂದು ಪ್ರಶ್ನಿಸಿದ್ದರು.

ಎಚ್ ಡಿಕೆ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಮ್ಯಾ, ನಾನು ಲಂಡನ್ ಗೆ ಮಜಾ ಮಾಡಲು ಹೋಗಿರಲಿಲ್ಲ. ಅಧ್ಯಯನಕ್ಕಾಗಿ ತೆರಳಿದ್ದೆ. ಇದು ಕುಮಾರ ಸ್ವಾಮಿ ಅವರ ಅವಿವೇಕತನದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ನಾನು ಅಧ್ಯಯನಕ್ಕಾಗಿ ಲಂಡನ್ ಗೆ ಹೋಗಿದ್ದೆ. ಕುಮಾರ ಸ್ವಾಮಿ ಶ್ರೀಲಂಕಾಗೆ ಏಕೆ ಹೋಗಿದ್ದರು ಎಂಬುದನ್ನು ಬಹಿರಂಗ ಪಡಿಸಲಿ ಎಂದು ರಮ್ಯಾ ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಬಳಿ ಬಿಎಂಡಬ್ಲ್ಯು, ಆಡಿ ಸೇರಿದಂತೆ ನಾಲ್ಕಾರು ಐಷಾರಾಮಿ ಕಾರುಗಳಿವೆ. ಮನೆಯಲ್ಲಿ ಪತ್ನಿ ರಾಧಿಕಾ ಮತ್ತು ಕುಮಾರಸ್ವಾಮಿ ಗೋಲ್ಡ್‌ ವಾಚ್‌ ಹಾಕಿಕೊಳ್ಳುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಬಗ್ಗೆ ಮಾತನಾಡುವ ನೈತಿಕತೆ ಕುಮಾರಸ್ವಾಮಿಗೆ ಇಲ್ಲ ಎಂದು ರಮ್ಯಾ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್