ರಮ್ಯಾ, ಎಚ್ ಡಿ ಕುಮಾರ ಸ್ವಾಮಿ ಮತ್ತು ದೇವೇಗೌಡ, 
ರಾಜಕೀಯ

ಮೌನ ಮುರಿದ ದೊಡ್ಡಗೌಡರು, ರಮ್ಯಾ ಎಚ್ ಡಿಕೆ ವಾಕ್ಸಮರಕ್ಕೆ ಎಚ್ ಡಿಡಿ ಎಂಟ್ರಿ

ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ. ..

ಹಾಸನ:  ಸಿಎಂ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ರಮ್ಯಾ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರು ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಎಚ್.ಡಿ.ದೇವೇಗೌಡರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣಕ್ಕಿಂತ ರಮ್ಯಾ ಅವರ ವಿಚಾರ ದೊಡ್ಡ ವಿಷಯವಲ್ಲ' ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಚ್ ಪ್ರಕರಣದ ಕುರಿತ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ರಮ್ಯಾ ಅವರ ಪ್ರಕರಣವನ್ನು ದೊಡ್ಡದು ಮಾಡಲಾಗುತ್ತಿದೆ. ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ' ಎಂದು ಹೇಳಿದರು.

ನಾನು ಯಾರ ಬಗ್ಗಯೂ ಹಗುರವಾಗಿ ಮಾತನಾಡುವುದಿಲ್ಲ. ಅದರಲ್ಲೂ ಆ ಹೆಣ್ಣುಮಗಳ ಬಗ್ಗೆಯಂತೂ ಮಾತನಾಡುವುದೇ ಇಲ್ಲ. ನನ್ನ ಬಗ್ಗೆ ಈಗಾಗಲೇ ಹಲವರು ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ದೇವೇಗೌಡರು ತಿಳಿಸಿದರು. ನನ್ನ ಕುಟುಂಬವನ್ನು ಮಾತ್ರ ರಾಜಕೀಯವಾಗಿ ಬೆಳೆಸಬೇಕೆಂದಿದ್ದರೆ ಜಿ.ಪುಟ್ಟಸ್ವಾಮಿ ಗೌಡರನ್ನು, ದೊಡ್ಡೇಗೌಡರನ್ನು ಎಂಎಲ್‌ಸಿ ಮಾಡುತ್ತಿರಲಿಲ್ಲ. ಆಗ ಯಾರು ಅವರ ಜೊತೆ ಇದ್ದರು. ಹಿಂದಿನದನ್ನು ನೆನೆಪು ಮಾಡಿಕೊಳ್ಳಿ' ಎಂದು ಗೌಡರು ಸಲಹೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel