ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ 
ರಾಜಕೀಯ

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ ಕುಮಾರಸ್ವಾಮಿಗೆ ಹೊಟ್ಟೆ ಕಿಚ್ಚು: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರ ಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ನಾನು ಮುಖ್ಯಮಂತ್ರಿ ಆಗಿರುವುದನ್ನು ಅವರಿಗೆ ...

ಬೆಂಗಳೂರು: ನಾನು ಸಿಎಂ ಆಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರ ಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ನಾನು ಮುಖ್ಯಮಂತ್ರಿ ಆಗಿರುವುದನ್ನು ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ಈ ರಾಜ್ಯದಲ್ಲಿ ಹಿಂದುಳಿದವರು ಮುಖ್ಯಮಂತ್ರಿ ಆಗುವುದನ್ನ ಸಹಿಸಲ್ಲ, ವೀರಪ್ಪ ಮೊಯ್ಲಿ, ಬಂಗಾರಪ್ಪ ಎಷ್ಟು ವರ್ಷ ಸಿಎಂ ಆಗಿದ್ದರು ಎಂದು ಪ್ರಶ್ನಿಸಿದ ಅವರು, ಇದು ಹಿಂದಿನಿಂದಲೂ ಹೀಗೆಯೇ ನಡೆದುಕೊಂಡು ಬಂದಿದೆ ಎಂದು ಹೇಳಿದರು. ನಾನು ಹಿಂದುಳಿದ ವರ್ಗಕ್ಕೆ ಸೇರಿದವನು ಎಂಬ ಕಾರಣಕ್ಕೆ ನನ್ನ ವಿರುದ್ಧ ಕುಮಾರ ಸ್ವಾಮಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾನು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವುದಿಲ್ಲ. ಯಾರಾದರೂ ಬೆಳ್ಳಿ ತಟ್ಟೆಯನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡು ಓಡಾಡುತ್ತಾರಾ ಎಂದು ಪ್ರಶ್ನಿಸಿದ ಸಿಎಂ, ಕುಮಾರಸ್ವಾಮಿಗೆ ಬುದ್ದಿ ಇಲ್ಲ ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ಆರೋಪಗಳೆಲ್ಲಾ ನಿರಾಧಾರ ವಾಚ್ ಕಳೆದುಕೊಂಡ ಬಗ್ಗೆ ದೂರುದಾರ ಡಾ. ಸುಧಾಕರ್ ಶೆಟ್ಟಿ ಎಲ್ಲಿಯೀ ಏನನ್ನೂ ಹೇಳಿಲ್ಲ. ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎಲ್ಲವನ್ನೂ ಕುಮಾರ ಸ್ವಾಮಿ ಅವರೇ ಮಾಡುತ್ತಿದ್ದಾರೆ ಎಂದು ದೂರಿದರು. ಇನ್ನು ಹೈ ಕಮಾಂಡ್ ಬಗ್ಗೆ ತಾವು ವಾಚ್ ವಿಷಯ ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಹಗ್ಗಜಗ್ಗಾಟ ನಡುವೆ ಗುಪ್ತಚರ ಮುಖ್ಯಸ್ಥರ ಬದಲಾವಣೆ: ಅಧಿಕಾರ ಇನ್ನೂ ನನ್ನ ಕೈಯಲ್ಲೇ ಇದೆ, ಕಠಿಣ ಸಂದೇಶ ರವಾನಿಸಿದ ಸಿದ್ದರಾಮಯ್ಯ..?

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

ಬುದ್ದ- ಜಗವೆಲ್ಲಾ ಮಲಗಿರಲು ಅವನೊಬ್ಬ ಎದ್ದ: ಬೌದ್ಧ ಪೌರ್ಣಮಿ ಮಹತ್ವ, ಆಚರಣೆ - ಸಂದೇಶ

ಜಾಗತಿಕ ಅಸ್ಥಿರತೆ ನಡುವೆಯೂ ಇಂಧನ ದರ ಸ್ಥಿರ: ಬೆಲೆ ಏರಿಕೆ ಹೊರೆ ಹೊತ್ತ ತೈಲ ಕಂಪನಿಗಳು, ಗ್ರಾಹಕರಿಗೆ ರಿಲೀಫ್..!

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

SCROLL FOR NEXT