ಬೆಂಗಳೂರು: ನಿರೀಕ್ಷೆಯಂತೆ ವಿಧಾನ ಮಂಡಲ ಅಧಿವೇಶನದಲ್ಲಿ ಉಭಯ ಸದನಗಳಲ್ಲೂ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ ಪ್ರತಿಧ್ವನಿಸಿದೆ.
ವಿಧಾನ ಸಭೆಯಲ್ಲಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಿಎಂ ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟವರು ಯಾರು? ಯಾತಕ್ಕಾಗಿ ಕೊಟ್ಟರು, ಎಲ್ಲಿಂದ ಬಂತು ಎಂಬುದನ್ನು ಬಹಿರಂಗ ಪಡಿಸಬೇಕು. ಜೊತೆಗೆ ಪ್ರಕರಣ ಸಂಬಂಧ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಶೆಟ್ಟರ್ ಪ್ರಸ್ತಾಪಕ್ಕೆ ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿ, ಸಂಪುಟ ಸಹೋದ್ಯೋಗಿಗಳು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ,ಜೆ ಜಾರ್ಜ್, ಆರ್. ವಿ, ದೇಶಪಾಂಡೆ, ಡಾ. ಜಿ. ಪರಮೇಶ್ವರ್ ವಿರೋಧ ವ್ಯಕ್ತ ಪಡಿಸಿದ್ದಾರೆ.
ಇನ್ನು ಪೂರ್ವಬಾವಿ ಪ್ರಸ್ತಾಪಕ್ಕೆ ಅವಕಾಶ ನೀಡದ್ದಕ್ಕೆ ಆಡಳಿತ ಪಕ್ಷದ ನಾಯಕರು ಸ್ಪೀಕರ್ ವಿರುದ್ಧ ಗರಂ ಆದರು. ನಿಯಮಾವಳಿಯಲ್ಲಿ ಇದನ್ನು ಪ್ರಸ್ತಾಪಿಸಲು ಅವಕಾಶ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ ಜಯಚಂದ್ರ ಆಕ್ಷೇಪ ವ್ಯಕ್ತ ಪಡಿಸಿದರು.