ಹೈಕೋರ್ಟ್ 
ರಾಜಕೀಯ

ಜಿಪಂ ಚುನಾವಣೆ: ತೀರ್ಪು ಕಾಯ್ದಿಟ್ಟ ಹೈಕೋರ್ಟ್

ಜಿಪಂ ಕ್ಷೇತ್ರಗಳ ಮೀಸಲು ಆವರ್ತನೆ(ರೊಟೇಶನ್)ಯಲ್ಲಿ ಹಲವು ಗೊಂದಲಗಳನ್ನು ಮಾಡಲಾಗಿದೆ ಎಂದು ಆರೋಪಿಸಿ...

ಬೆಂಗಳೂರು: ಜಿಪಂ ಕ್ಷೇತ್ರಗಳ ಮೀಸಲು ಆವರ್ತನೆ(ರೊಟೇಶನ್)ಯಲ್ಲಿ ಹಲವು ಗೊಂದಲಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಜಿಲ್ಲಾ ಪಂಚಾಯತ್ ಚುನಾವಣೆಗೆ ಹೊರಡಿಸಿರುವ ಮೀಸಲು ಪಟ್ಟಿಯಲ್ಲಿ ಗೊಂದಲಗಳಿದ್ದು ಚುನಾವಣೆಗೆ ತಡೆ ನೀಡಬೇಕು ಎಂದು ಕೋರಿ ಸುಮಾರು 150ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ, ಮೀಸಲು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ್ದು, ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರದಿಂದ ವಿಚಾರಣೆಗೆ ಕೈಗೈತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
ವಿಚಾರಣೆ ವೇಳೆ ಆಯೋಗದ ಪರ ವಕೀಲ ಕೆಎಸ್ ಫಣೀಂದ್ರ ಮೀಸಲು ನಿಯಮಗಳ ಪ್ರಕಾರವೇ ನಿಗದಿ ಮಾಡಲಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ರೊಟೇಷನ್ ಪುನರಾವರ್ತಿತವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ಸಲ್ಲಿಕೆಯಾಗಿರುವ ಅರ್ಜಿಗಳಂತೆಯೇ ಕಳೆದ ಬಾರಿಯೂ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರ ಪರ ಆದೇಶ ನೀಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಪ್ರಸಕ್ತದ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ