ಜೆಡಿಎಸ್ ಲೋಗೋ 
ರಾಜಕೀಯ

ಕಾಂಗ್ರೆಸ್ ಅತೃಪ್ತರನ್ನೇ ಕಣಕ್ಕಿಳಿಸಿದ ಜೆಡಿಎಸ್

ಅಂತೂ ಅಳೆದು, ತೂಗಿ ವಿಧಾನ ಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ಅತೃಪ್ತರನ್ನೇ ...

ಬೆಂಗಳೂರು: ಅಂತೂ ಅಳೆದು, ತೂಗಿ ವಿಧಾನ ಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ ಅತೃಪ್ತರನ್ನೇ  ಜೆಡಿಎಸ್ ಬುಟ್ಟಿಗೆ ಹಾಕಿಕೊಂಡಿದೆ.

ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಸ್ಮಾಯಿಲ್ ಷರೀಫ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬೀದರ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಯಾಝ ಖಾನ್ ಸ್ಪರ್ಧಿಸಲಿದ್ದು, ದೇವದುರ್ಗ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕರಿಯಮ್ಮಖಾನ್  ಅವರು ಸ್ಪರ್ಧಿಸಲಿದ್ದಾರೆ ಎಂದು ಮಂಗಳವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡರು ತಿಳಿಸಿದ್ದಾರೆ.

ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜನವರಿ 27ರ ಬುಧವಾರ ಕೊನೆಯ ದಿನವಾಗಿದೆ. ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಸಾಕಷ್ಟು ಗೊಂದಲಗಳು ಏರ್ಪಟ್ಟಿದ್ದವು. ಬೀದರ್‌ನಲ್ಲಿ ಸೂರ್ಯಕಾಂತ ನಾಗಮಾರಪಲ್ಲಿ ಅವರಿಗೆ ಟಿಕೆಟ್ ಕೊಡಲು ಬಿಜೆಪಿ ತಯಾರಾಗಿತ್ತು. ಆದರೆ, ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಪ್ರಕಾಶ್‌ ಖಂಡ್ರೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

ಬಿಜೆಪಿಗೆ ಪರೋಕ್ಷ ಬೆಂಬಲ ಇಲ್ಲ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು, ಪಕ್ಷದ ಎಲ್ಲಾ ಶಾಸಕರ ಸಮ್ಮತಿ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎಂದರು. ಹೆಬ್ಬಾಳ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಸಹಮತ ವ್ಯಕ್ತ ಪಡಿಸಿದ್ದಾರೆ, ಅಭ್ಯರ್ಥಿ ಹೆಸರು ಘೋಷಿಸುವ ಬಗ್ಗೆ ತಿಳಿಸಲು ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!