ಕೆಎಸ್ ಈಶ್ವರಪ್ಪ 
ರಾಜಕೀಯ

ಜಿಪಂ ಗೆ ಈಶ್ವರಪ್ಪ ಪುತ್ರ ಸ್ಪರ್ಧೆ

ದೇವೇಗೌಡರ ಕುಟುಂಬ ರಾಜಕಾರಣ ವಿರೋಧಿಸಿದ್ದ ಬಿಎಸ್ ವೈ ಅವರ ಪುತ್ರನಿಗೆ ಲೋಕಸಭಾ ಟಿಕೆಟ್ ಸಿಕ್ಕಾಗ ಅಸಮಾಧಾನಗೊಂಡಿದ್ದ...

ಶಿವಮೊಗ್ಗ: ದೇವೇಗೌಡರ ಕುಟುಂಬ ರಾಜಕಾರಣ ವಿರೋಧಿಸಿದ್ದ ಬಿಎಸ್ ವೈ ಅವರ ಪುತ್ರನಿಗೆ ಲೋಕಸಭಾ ಟಿಕೆಟ್ ಸಿಕ್ಕಾಗ ಅಸಮಾಧಾನಗೊಂಡಿದ್ದ ಕೆ.ಎಸ್.ಈಶ್ವರಪ್ಪ ಅವರು ಈಗ ಕುಟುಂಬ ರಾಜಕಾರಣಕ್ಕೆ ಅಡಿ ಇಟ್ಟಿದ್ದಾರೆ. ಪುತ್ರ. ಕೆ.ಇ.ಕಾಂತೇಶ್ ಅವರಿಗೆ ಬಿಜೆಪಿ ಶಿವಮೊಗ್ಗ ಹೊಳಲೂರು ಜಿಪಂ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. 
ಕುಟುಂಬ ರಾಜಕಾರಣ ವಿರೋಧಿಸಿ ಪಕ್ಷದಲ್ಲಿ ಭಾರಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಸ್.ಎನ್. ಚನ್ನಬಸಪ್ಪ ಅವರು ಪಕ್ಷದ ಎಳ್ಲಾ ಹುದ್ದೆಗಳಿಗೆ ರಾಜಿನಾಮೆ ಸಲ್ಲಿಸಿದ್ದು, ಬಿಜೆಪಿ ಕಚೇರಿ ಎದುರು ಟಿಕೆಟ್ ವಂಚಿತರು ಧರಣಿ ನಡೆಸಿದ್ದಾರೆ. ನಿರ್ದಿಷ್ಟವಾಗಿ ಕಾಂತೇಶ್ ಅವರಿಗೆ ಟಿಕೆಟ್ ಕೊಡುವುದನ್ನು ಅವರು ವಿರೋಧಿಸಿಲ್ಲವಾದರೂ ಅವರ ರಾಜಿನಾಮೆ ಪತ್ರದಲ್ಲಿ ಈ ಭಾವ ಸ್ಪಷ್ಟವಾಗಿದೆ. 
ಇದೆಲ್ಲದರ ನಡುವೆಯೂ ಟಿಕೆಟ್ ದೊರಕಿದೆ. ಈ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷ ದತ್ತಾತ್ರಿ ಅವರು, ಕಾಂತೇಶ್ ಅವರ ಸ್ಪರ್ಥೆ ಕುಟುಂಬ ರಾಜಕಾರಣದ ವ್ಯಾಪ್ತಿಗೆ ಬರುವುದಿಲ್ಲ. 10 ವರ್ಷದಿಂದ ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಹೊಳಲೂರು ಕ್ಷೇತ್ರ ಕಾರ್ತಕರ್ತರೂ ಇವರ ಉಮೇದುವಾರಿಕೆ ಬೆಂಬಲಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್