ರಾಜಕೀಯ

ರಾಜ್ಯದ ಆರು ಕಡೆ ಕಾಂಗ್ರೆಸ್ ಸಮಾವೇಶಕ್ಕೆ ಸಿದ್ಧತೆ

Shilpa D

ಬೆಂಗಳೂರು: ಮೂರು ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆ, ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಎಂಟು ಕಡೆ ಬೃಹತ್‌ ಸಮಾವೇಶಗಳನ್ನು ನಡೆಸಲು ಕಾಂಗ್ರೆಸ್‌ ತೀರ್ಮಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ತಿಳಿಸಿದರು.

ರಾಜ್ಯ ಸರ್ಕಾರದ ಎರಡೂವರೆ ವರ್ಷಗಳ ಸಾಧನೆ, ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ತಿಳಿಸಿ ವಿಧಾನಸಭೆ ಉಪ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಕೋರಲು ಈ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣಾ ಸಿದ್ಧತೆ ಮತ್ತು ಸಮಾವೇಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಬುಧವಾರ ಮತ್ತು ಗುರುವಾರ ಬೆಳಗ್ಗೆ ಸಮಾಲೋಚನೆ ನಡೆಸಿದ್ದೇನೆ. ಎಲ್ಲಾ ಸಮಾವೇಶಗಳನ್ನು ಅದ್ಧೂರಿಯಾಗಿ ನಡೆಸಲಾಗುವುದು. ಜ. 31ರಂದು ಹೆಬ್ಟಾಳದಲ್ಲಿ ಪ್ರಥಮ ಸಮಾವೇಶ ನಡೆಯಲಿದೆ. ಬಳಿಕ ಫೆ. 6ರಂದು ಮೈಸೂರು, ಫೆ. 7ರಂದು ಬೀದರ್‌ ಮತ್ತು ಕಲಬುರಗಿ, ಫೆ. 8ರಂದು ತುಮಕೂರು, ಫೆ. 9ರಂದು ಹುಬ್ಬಳ್ಳಿ, ಫೆ. 10ರಂದು ದೇವದುರ್ಗ ಹಾಗೂ ಫೆ. 11ರಂದು ಮತ್ತೆ ಹೆಬ್ಟಾಳದಲ್ಲಿ ಪಕ್ಷದ ಸಮಾವೇಶಗಳು ನಡೆಯಲಿವೆ ಎಂದು ವಿವರ ನೀಡಿದರು.

40 ಸ್ಟಾರ್‌ ಪ್ರಚಾರಕರು:

ವಿಧಾನಸಭೆ ಉಪ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಸೇರಿದಂತೆ 40 ಸ್ಟಾರ್‌ ಪ್ರಚಾರಕರನ್ನು ನೇಮಕ ಮಾಡಲಾಗಿದೆ. ಪ್ರಚಾರ ಕಾರ್ಯ ಮತ್ತು ಸಮಾವೇಶಗಳಿಗೆ ದಿಗ್ವಿಜಯ್‌ ಸಿಂಗ್‌ ಅವರನ್ನೂ ಆಹ್ವಾನಿಸಲಾಗುತ್ತಿದೆ ಎಂದರು.

ತಮ್ಮನ್ನೂ ಒಳಗೊಂಡಂತೆ ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದರಾದ ಆಸ್ಕರ್‌ ಫ‌ರ್ನಾಂಡೀಸ್‌, ಎಂ.ವೀರಪ್ಪ ಮೊಯ್ಲಿ, ಕೆ.ಎಚ್‌.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್‌ ಮತ್ತಿತರರು ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಇವರೆಲ್ಲರೂ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

SCROLL FOR NEXT