ರಾಜಕೀಯ

ವಿಧಾನಸಭೆ ನೂತನ ಸ್ಪೀಕರ್ ಆಗಿ ಕೆ.ಬಿ.ಕೋಳಿವಾಡ್ ಅವಿರೋಧ ಆಯ್ಕೆ

Lingaraj Badiger
ಬೆಂಗಳೂರು: ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿ ಕೊನೆಗೂ ಸಚಿವ ಸ್ಥಾನ ಗಿಟ್ಟಿಸುವಲ್ಲಿ ವಿಫಲರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ್‌ ಅವರು ವಿಧಾನಸಭೆ ನೂತನ ಸ್ಪೀಕರ್‌ ಆಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಈ ಹಿಂದೆ ಸ್ಪೀಕರ್ ಆಗಿದ್ದ ಕಾಗೋಡು ತಿಮ್ಮುಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರ್ಪಡೆಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯುತ್ತಿದೆ. ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಅವಕಾಶವಿದೆ. ಆದರೆ ಇದುವರೆಗೂ ಕೋಳಿವಾಡ್ ಹೊರತಾಗಿ ಯಾರೊಬ್ಬರು ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಅವರು ನಾಳೆ ಬೆಳಗ್ಗೆ ಕೋಳಿವಾಡ್ ಅವರ ಅವಿರೋದ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಕೆ.ಬಿ.ಕೋಳಿವಾಡ್ ಅವರು ನಾಳೆಯೇ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ನೂತನ ಸ್ಪೀಕರ್ ಗೆ ವಿಧಾನಸಭೆ ಸಭಾನಾಯಕರು ಹಾಗೂ ಪ್ರತಿಪಕ್ಷ ನಾಯಕರು ಅಭಿನಂದನೆ ಸಲ್ಲಿಸಲಿದ್ದಾರೆ.
SCROLL FOR NEXT