ಸಿಎಂ ಸಿದ್ದರಾಮಯ್ಯ ಜೊತೆ ಪುತ್ರ ರಾಕೇಶ್ (ಸಂಗ್ರಹ ಚಿತ್ರ) 
ರಾಜಕೀಯ

ಮರಿಗೌಡ ನನ್ನ ಅಪ್ಪನ ಆಪ್ತರಲ್ಲ, ಕಾಂಗ್ರೆಸ್ ನಾಯಕ ಅಷ್ಟೇ: ರಾಕೇಶ್ ಸಿದ್ದರಾಮಯ್ಯ

ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ನಿಂದಿಸಿದ ಆರೋಪ ಎದುರಿಸುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಸಿದ್ದರಾಮಯ್ಯ ಆಪ್ತರಲ್ಲ, ಅವರು ಕಾಂಗ್ರೆಸ್...

ಮೈಸೂರು: ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ನಿಂದಿಸಿದ ಆರೋಪ ಎದುರಿಸುತ್ತಿರುವ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಸಿದ್ದರಾಮಯ್ಯ ಆಪ್ತರಲ್ಲ, ಅವರು ಕಾಂಗ್ರೆಸ್ ನಾಯಕರುಗಳಲ್ಲಿ  ಒಬ್ಬರು ಎಂದು ಸಿದ್ದರಾಮಯ್ಯ ಪುತ್ರ ರಾಕೇಶ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ನಂತರ ಮಾತನಾಡಿದ ರಾಕೇಶ್ ಸಿದ್ದರಾಮಯ್ಯ , ಮರೀಗೌಡ ಅವರ ತಪ್ಪು ಮಾಡಿದ್ದು ಸಾಬೀತಾದರೆ ಶಿಕ್ಷೆ ಅನುಭವಿಸಲಿ. ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಪ್ರಕರಣಕ್ಕೂ ತಂದೆಗೂ ತಳಕು ಹಾಕುವುದು ಸರಿಯಲ್ಲ ಎಂದು ಹೇಳಿದರು.

ಕಳೆದ  15 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಆಸೆ ನನಗೂ ಇದೆ. ತಮ್ಮ ತಂದೆ ಸಿದ್ದರಾಮಯ್ಯ ಅವರು ಸೂಚಿಸಿದ ಕ್ಷೇತ್ರದಲ್ಲಿ ಕಣಕ್ಕೆ ಇಳಿಯಲಿದ್ದೇನೆ, ತಂದೆಯವರ ಸೂಚನೆಗೆ ಕಾಯುತ್ತಿದ್ದೇನೆ ಎಂದು ರಾಕೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT