ಬೆಂಗಳೂರು: ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ರಾಜೀನಾಮೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಾರಣವಾಗಿದ್ದಾರೆ.
ಮಡಿಕೇರಿಯಲ್ಲಿ ಎಂ.ಕೆ ಗಣಪತಿ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದ ಕುಮಾರಸ್ವಾಮಿ ನ್ಯಾಯಾಲಯದ ಮೊರೆ ಹೋಗುವಂತೆ ಸಲಹೆ ಮತ್ತು ನೆರವು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರನ ಹೇಳಿಕೆಯನ್ನೇ ಪ್ರಮುಖವಾಗಿ ಪರಿಗಣಿಸಿ ಎಫ್ಐಆರ್ ದಾಖಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದ ಕುಮಾರಸ್ವಾಮಿ ಅವರು ಅದಕ್ಕಾಗಿ ವಕೀಲರ ನೆರವನ್ನೂ ಕೊಟ್ಟಿದ್ದರು. ನಂತರ ಈ ಬಗ್ಗೆ ಬಹಿರಂಗವಾಗಿಯೂ ಹೇಳಿಕೆ ನೀಡಿದ್ದರು
ಕುಮಾರಸ್ವಾಮಿ ಅವರ ಸಲಹೆ ಮತ್ತು ನೆರವು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಜೆ.ಜಾರ್ಜ್ ಈಗ ತಮ್ಮ ಸಚಿವ ಸ್ಥಾನ ಕಳೆದುಕೊಳ್ಳಲು ಪ್ರಮುಖ ಕಾರಣವಾಯಿತು.