ಎಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಸಿದ್ದರಾಮಯ್ಯ ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ: ಎಚ್ ಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇರುವುದರಿಂದಲೇ ಸಿಎಂ ಪಟಾಲಂ...

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಟಾಲಂಗಾಗಿ ಸರ್ಕಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇರುವುದರಿಂದಲೇ ಸಿಎಂ ಪಟಾಲಂ ತಮ್ಮಿಷ್ಟ ಬಂದಂತೆ ವರ್ತಿಸುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿಕೆ, ಸಿಎಂ ತಮ್ಮ ಪಟಾಲಂ ರಕ್ಷಣೆಗೆ ನಿಂತಿದ್ದಾರೆ. ಅವರು ಮನಸ್ಸು ಮಾಡಿದರೆ ಮರಿಗೌಡನನ್ನು 24 ಗಂಟೆಗಳಲ್ಲಿ ಬಂಧಿಬಹುದು. ದಲಿತ ಮಹಿಳೆಗೆ ಅವಮಾನ ಮಾಡಿದ್ದಕ್ಕೆ ಪಿಸಿಆರ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು. ಆದರೆ ಮರಿಗೌಡ ವಿರುದ್ಧ ಪಿಸಿಆರ್ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಲ್ಲ. ಮೈಸೂರು ಪೊಲೀಸರ ಮೇಲೆ ಸಿಎಂ ಪ್ರಭಾವ ಇದೆ. ಮೈಸೂರು ಡಿಸಿ ಶಿಖಾ ಪ್ರಕರಣದ ತನಿಖೆಗೆ ನಡೆಸಲು ಖಡಕ್ ಅಧಿಕಾರಿಯ ಅಗತ್ಯವಿದೆ ಎಂದರು.
ಇದೇ ವೇಳೆ ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣದಲ್ಲಿ ತಮ್ಮ ವಿರುದ್ಧದ ಸಿಎಂ ಆರೋಪದ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ದಾಖಲೆ ಇಲ್ಲದೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದರು. ಅಲ್ಲದೆ ಸೂಟ್ ಕೇಸ್ ಸಂಸ್ಕೃತಿ ಬಗ್ಗೆ ನಾನು ಪ್ರಸ್ತಾಪಿಸಿದ್ದಾ? ಕಳೆದ ಮೂರು ವರ್ಷಗಳ ಕಾಲ ನಿಮ್ಮ ಜೊತೆ ಕೆಲಸ ಮಾಡಿದ್ದ ಶ್ರೀನಿವಾಸ್ ಪ್ರಸಾದರೇ ಇದನ್ನು ಹೇಳಿದ್ದು. ಆದರೆ ನೀವು ನನ್ನ ಮೇಲೆ ಕೆಂಡ ಕಾರುತ್ತೀರಿ ಯಾಕೆ ಎಂದು ಪ್ರಶ್ನಿಸಿದರು.
ಯಾರ ಮೇಲೂ ನನಗೆ ವೈಯಕ್ತಿಕವಾಗಿ ದ್ವೇಷ ಇಲ್ಲ. ಜಾರ್ಜ್ ರಾಜಿನಾಮೆಗೆ ನಾನು ಆಗ್ರಹಿಸಿಲ್ಲ. ನೀವು ಶವವಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದೀರಿರೆಂದು ನನ್ನ ಮೇಲೆ ಆರೋಪಿಸಿದ್ದೀರಿ. ಆದರೆ ರೈತರ ಆತ್ಮಹತ್ಯೆ ವಿಚಾರದಲ್ಲಿ ಸದನದಲ್ಲಿ ನಾನು ನಿಮ್ಮ ಜೊತೆ ಇದ್ದೆ. ನೀವು ಹಳೆಯದ್ದನ್ನು ಮರೆತಿದ್ದೀರಾ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video