ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಕಾಂಗ್ರೆಸ್ ಮುಖಂಡ ಜಾಫರ್ ಷರೀಫ್ 
ರಾಜಕೀಯ

ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಜಾಫರ್ ಷರೀಫ್ ಸಲಹೆ

ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ...

ಬೆಂಗಳೂರು: ಮುಂದಿನ ಚುನಾವಣೆಯಲ್ಲೂ ರಾಜ್ಯದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಶರೀಫ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಅಧಃಪತನವಾದಾಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಉಂಟು. ಇರುವ ಅಧಿಕಾರವನ್ನು ಉಳಿಸಿಕೊಳ್ಳಬೇಕು. ಇಲ್ಲದ ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವುದು ಒಳ್ಳೆಯದಲ್ಲ ಎಂದರು.

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಜೆ.ಜಾರ್ಜ್ ಅವರು ಮೊದಲೇ ರಾಜೀನಾಮೆ ಕೊಡಬೇಕಾಗಿತ್ತು. ರಾಜೀನಾಮೆ ಕೊಡಲು ವಿಳಂಬವಾದದ್ದು ಏಕೆ ಎಂಬುದು ನನಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದರಲ್ಲದೆ, ಸರ್ಕಾರ ಪ್ರಕರಣದ ತನಿಖೆ ನಡೆಸಿದರಷ್ಟೇ ಸಾಲದು, ಸಹಾನುಬೂತಿ ತೋರಬೇಕಿದೆ ಎಂದು ಅಭಿಪ್ರಾಯ ಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್