ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದೆರೆ ಹಾಸನ ಮುಸ್ಲಿಮರಿಗೆ ಬಿಟ್ಟುಕೊಡಿ: ಗೌಡರಿಗೆ ಜಮೀರ್ ಅಹ್ಮದ್ ಸವಾಲು

ರಾಜ್ಯಸಭೆ ಚುನಾವಣೆಗೆ ಬಿ.ಎಂ.ಫಾರೂಕ್ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ...

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿ.ಎಂ.ಫಾರೂಕ್ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ನಿಮಗೆ ನಿಜಕ್ಕೂ ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಹಾಸನವನ್ನೋ ಅಥವಾ ರಾಮನಗರ ಲೋಕಸಭಾಕ್ಷೇತ್ರವನ್ನು ಮುಸ್ಲಿಂ ಅಭ್ಯರ್ಥಿಗಳಿಗೆ ಬಿಟ್ಟುಕೊಡಿ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರಿಗೆ ಸವಾಲು ಹಾಕಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ದೇವೇಗೌಡರಿಗೆ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಮುಸ್ಲಿಮರ ಕಾಳಜಿ ಕೇವಲ ನಾಟಕ ಎಂದರು.
ದೇವೇಗೌಡರು ತಮ್ಮ ಮಗನ ವ್ಯವಹಾರಕ್ಕಾಗಿ ರಾಜ್ಯಸಭಾ ಟಿಕೇಟನ್ನು ಕಾಂಗ್ರೆಸ್‌ನಿಂದ ಬಂದ ಫಾರೂಕ್‌ ಅವರಿಗೆ ನೀಡಿದ್ದಾರೆ. ನಮ್ಮಲ್ಲೂ ಮುಸ್ಲಿಂ ಅಭ್ಯರ್ಥಿಗಳಿರಲಿಲ್ಲವೇ? ಡ್ಯಾನಿಷ್‌ ಅಲಿ ಇದ್ದರು, ಜಫ್ರುಲ್ಲಾ ಖಾನ್‌ ಇದ್ದರು. ಇವರೆನ್ನೆಲ್ಲಾ ಬಿಟ್ಟು ಫಾರೂಕ್‌ಗೆ ಟಿಕೆಟ್ ನೀಡಿರುವುದು ಏಕೆ ಎಂದು ಪ್ರಶ್ನಿಸಿದರು.
ಇದೇ ವೇಳೆ ನಮ್ಮ ಮತ ಏನಿದ್ದರು ಕಾಂಗ್ರೆಸ್‌ಗೆ ಎಂದು ಜಮೀರ್‌ ಅಹ್ಮದ್ ಒತ್ತಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿರುವ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ; ರಾಹುಲ್ ಗಾಂಧಿ

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!