ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಅಡ್ಡಮತದಾನ: ಇಂದು ಜೆಡಿಎಸ್ ಬಂಡಾಯ ಶಾಸಕರ ಅಮಾನತು ಸಾಧ್ಯತೆ

ರಾಜ್ಯಸಭೆ ಚುನವಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದ 8 ಜೆಡಿಎಸ್ ಶಾಸಕರನ್ನು ಇಂದು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ..

ಜಮೀರ್ ಅಹಮದ್ ಖಾನ್, ಬಾಲಕೃಷ್ಣ, ಚಲುವರಾಯಸ್ವಾಮಿ
Shilpa D
Updated On : 12 Jun 2016, 10:03 am

ಬೆಂಗಳೂರು: ರಾಜ್ಯಸಭೆ ಚುನವಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದ 8 ಜೆಡಿಎಸ್ ಶಾಸಕರನ್ನು ಇಂದು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಜೆಡಿಎಸ್ ವಕ್ತಾರ ರಮೇಶ ಬಾಬು ಹೇಳಿದ್ದಾರೆ.

ಎಂಟು ಮಂದಿ ಜೆಡಿಎಸ್ ಭಿನ್ನಮತೀಯ ಶಾಸಕರ ವಿರುದ್ಧ ಏನು ಶಿಸ್ತು ಕ್ರಮ ಜರುಗಿಸಬಹುದು ಎಂಬುದರ ಬಗ್ಗೆ ಅವಲೋಕನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾನೂನಿನಡಿಯಲ್ಲಿ ಅಗತ್ಯವಿರುವ ಕ್ರಮ ಕೈಗೊಳ್ಳಲು ತನಿಖಾ ಸಮಿತಿ ರಚಿಸಲಾಗುವುದು. ಭಿನ್ನಮತೀಯ ಶಾಸಕರೇ ತಮ್ಮ ಸ್ವಇಚ್ಚೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಅವಕಾಶವನ್ನು ಕೂಡಜ ನೀಡಲಾಗುವುದು ಎಂದು ರಮೇಶ್ ಬಾಬು ಹೇಳಿದ್ದಾರೆ.

ಬಂಡಾಯ ಶಾಸಕರು ಕಾಂಗ್ರೆಸ್ ಮುಖಂಡರನ್ನ ಭೇಟಿ ಮಾಡಿರುವ ಹಿನ್ನೆಲೆಯಲ್ಲಿ, ಅವರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಅವರಿಗೆ ದೂರು ದಾಖಲಿಸಲಾಗುವುದು, ಜೊತೆಗೆ ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನು ಭಿನ್ನಮತೀಯರ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಾದ ಜಮೀರ್ ಅಹಮದ್ ಖಾನ್, ಚಲುವರಾಯಸ್ವಾಮಿ, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಅನ್ಸಾರಿ, ಅಖಂಡ ಶ್ರೀನಿವಾಸ ಮೂರ್ತಿ ಸೇರಿದಂತೆ 8 ಮಂದಿ ಶಾಸಕರನ್ನು ಅವರ ಪಾಡಿಗೆ ಬಿಡಲಾಗುವುದು, ಈ ಶಾಸಕರು ತಮಗಿಷ್ಟ ಬಂದ ಹಾಗೆ ಸ್ವತಂತ್ರ್ಯವಾಗಿರಲಿ , ತಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಅನುದಾನ ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments