ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಸತತ ಏಳನೇ ಬಾರಿಗೆ ದಾಖಲೆಯ ಗೆಲವು ಸಾಧಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಯಾಗಿ ಪುನಾರಾಯ್ಕೆಯಾಗಲು ಬಯಸಿದ್ದ ಹೊರಟ್ಟಿ 7ನೇ ಭಾರಿಯೂ ಗೆಲುವಿನ ನಗೆ ಬೀರಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಮುಗಿದಿದ್ದು, ಹೊರಟ್ಟಿ ಅವರ ಗೆಲುವು ಜೆಡಿಎಸ್ ಕಾರ್ಯಕರ್ತರಲ್ಲಿ ಹರ್ಷ ತಂದಿದೆ.
ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಚುನಾವಣೆಯಲ್ಲಿ, ಇಂದು ಬೆಳಗ್ಗಿನಿಂದ ನಡೆದ ಮತ ಎಣಿಕೆ ಕಾರ್ಯದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಎಂ.ನಾಗರಾಜ್ ಹಾಗೂ ಕಾಂಗ್ರೆಸ್ ಟಿ.ಈಶ್ವರ್ ವಿರುದ್ಧ ಜಯ ಜೆಡಿಎಸ್ ನ ಬಸವರಾಜ ಹೊರಟ್ಟಿ ಜಯ ಸಾಧಿಸಿದ್ದಾರೆ.