ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯಗೆ ವರವಾಯ್ತು ರಾಜ್ಯಸಭೆ ಮತ್ತು ಪರಿಷತ್ ಚುನಾವಣೆ ಗೆಲುವು

ರಾಜ್ಯಸಭೆ ಚುನಾವಣೆ ಫಲಿತಾಂಶ ಸಿಎಂ ಸಿದ್ದರಾಮಯ್ಯ ಅವರಿಗೆ ವರವಾಗಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಉರುಳಿಸಿದ ಖ್ಯಾತಿ ಸಿದ್ದರಾಮಯ್ಯಗೆ ..

ಮೈಸೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಸಿಎಂ ಸಿದ್ದರಾಮಯ್ಯ ಅವರಿಗೆ ವರವಾಗಿದೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಉರುಳಿಸಿದ ಖ್ಯಾತಿ ಸಿದ್ದರಾಮಯ್ಯಗೆ ಸಂದಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರನ್ನು ಎತ್ತಿಕಟ್ಟಿ ಅಡ್ಡ ಮತದಾನ ಮಾಡಿಸುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಟಾಂಗ್ ನೀಡಿರುವ ಸಿದ್ದರಾಮಯ್ಯ, ಪಕ್ಷದ ಮೂರನೇ ಅಭ್ಯರ್ಥಿ ಕೆ.ಸಿ ರಾಮಮೂರ್ತಿ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ಖುರ್ಚಿಯನ್ನು ಭದ್ರಗೊಳಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಲ್ಲಿ ತಾವು ತಮ್ಮ ಸ್ಥಾನವನ್ನು ಬಲಗೊಳಿಸಿಕೊಳ್ಳುವ ಜೊತೆಗೆ ಹಳೇ ಮೈಸೂರು ಬಾಗದಲ್ಲಿ ಜೆಡಿಎಸ್ ಪಕ್ಷವನ್ನು ಬಲಹೀನಗೊಳಿಸಿದ್ದಾರೆ. ಜೆಡಿಎಸ್ ಭಿನ್ನಮತೀಯರ ಬೆಂಬಲ ಪಡೆದುಕೊಂಡು ಪಕ್ಷವನ್ನು ಒಡೆಯುವ ಮೂಲಕ ಕೆಪಿಸಿಸಿ ಅಧ್ಯಕ್ಷರಾಗಲು ಹವಣಿಸುತ್ತಿರುವ ಡಿ.ಕೆ ಶಿವಕುಮಾರ್ ಗೆ ಮತ್ತಷ್ಟು ಬಲ ತಂದು ಕೊಟ್ಟಿದೆ.

ಎಸ್ ಎಂ ಕೃಷ್ಣ, ರಮ್ಯಾ ಮತ್ತು ಅಂಬರೀಷ್ ನಡುವಿನ ಒಳಜಗಳದಲ್ಲಿ ಬಸವಳಿದಿದ್ದ ಮಂಡ್ಯ ಕ್ಷೇತ್ರವನ್ನು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮತ್ತೆ ತನ್ನ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿತ್ತು. ಆದರೆ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ತೋರದ ಜೆಡಿಎಸ್ ಮಂಡ್ಯ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ದೇವೇಗೌಡರನ್ನು ಕೈ ಬಿಡುವುದಿಲ್ಲ ಎಂಬ ಸಂದೇಶ ರವಾನಿಸಿತ್ತು.

ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಲಗೈ ಬಂಟರಾಗಿದ್ದ, ಮಂಡ್ಯ ಶಾಸಕ ಎನ್. ಚಲುವರಾಯಸ್ವಾಮಿ, ಚಾಮರಾಜಪೇಟೆ ಶಾಸಕ, ಜಮೀರ್ ಅಹಮದ್ ಖಾನ್ ಮತ್ತು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಅವರ ಬಂಡಾಯವನ್ನ ತನ್ನ ಬಂಡವಾಳವನ್ನಾಗಿ ಮಾಡಿಕೊಂಡ ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲು ಬಳಸಿಕೊಳ್ಳುತ್ತಿದೆ.

ಪ್ರಸಕ್ತ ಜೆಡಿಎಸ್ ಶಾಸಕರುಗಳಿರುವ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಥವಾ ಬಿಜೆಪಿ ಒಬ್ಬ ಶಾಸಕನನ್ನು ಕಳೆದುಕೊಂಡರೆ ಅಲ್ಲಿ ನಾಲ್ಕಾರು ಪರ್ಯಾಯ ನಾಯಕರು ಗೋಚರಿಸುತ್ತಾರೆ. ಆದರೆ ಜೆಡಿಎಸ್ ಪರಿಸ್ಥಿತಿ ಹಾಗಿಲ್ಲ. ಒಬ್ಬ ಶಾಸಕ ಹೋದರೆ ಇಡೀ ಕ್ಷೇತ್ರವೇ ಆತನ ಜತೆ ಹೋದಂತೆ. ಮತ್ತೆ ಕ್ಷೇತ್ರವನ್ನು ಕಟ್ಟಿ, ಸುಪರ್ದಿಗೆ ಪಡೆಯಲು ಮತ್ತೊಬ್ಬ ನಾಯಕನ ಸೃಷ್ಟಿ ಸದ್ಯದಲ್ಲಿ ಸಾಧ್ಯವಿಲ್ಲ. ಇದು ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಹೀನ ಮಾಡಿದೆ.

ಈ ಎಲ್ಲಾ ಬೆಳವಣಿಗೆಗಳು 2018 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಸಹಾಯವಾಗಲಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯ.

ಇನ್ನು ಜೆಡಿಎಸ್ ಅನ್ನು ಛಿದ್ರಗೊಳಿಸಿ ಮತ್ತಷ್ಟು ಪ್ರಭಾವಿ ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಕರೆತರಲು ಸಿಎಂ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ, ಆ ಮೂಲಕ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಪ್ರಾಬಲ್ಯ ಕಡಿಮೆ ಮಾಡಲು ಯತ್ನಿಸುತ್ತಿದ್ದಾರೆ. ಇನ್ನು ಇದೇ ವೇಳೆ ಲಿಂಗಾಯತ ಮತಗಳನ್ನ ಸೆಳೆಯಲು ಈ ಇಬ್ಬರು ಹಲವು ತಂತ್ರಗಳನ್ನು ರೂಪಿಸುತ್ತಿದ್ದು, ಜೆಡಿಎಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!